ನ್ಯಾಯಸಮ್ಮತ ಚುನಾವಣೆಗಾಗಿ ಪೊಲೀಸರಿಂದ ಪಥಸಂಚಲನ

Source: sonews | By Staff Correspondent | Published on 29th March 2019, 6:31 PM | Coastal News | Don't Miss |

ಭಟ್ಕಳ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪೊಲೀಸ್ ಇಲಾಖೆ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಯನ್ನು ನಡೆಸುವ ಕುರಿತು ಜನತೆಗೆ ಖಾತ್ರಿ ಪಡಿಸಲು ತಾಲೂಕಿನ ವಿವಿದೆಡೆಗಳಲ್ಲಿ ಪಥ ಸಂಚಲನ ನಡೆಸಿದೆ.  

ತಾಲೂಕಿನ ಜಾಲಿ ರಸ್ತೆಯಿಂದ ಆರಂಭವಾದ ಪಥ ಸಂಚಲನವು ಆಜಾದ ನಗರ 1ನೇ ಕ್ರಾಸ್ ತನಕ ತಲುಪಿ ಅಲ್ಲಿಂದ ಮತ್ತೆ ವಾಪಾಸಾಯಿತು. ನಂತರ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಥ ಸಂಚಲನ ನಡೆಸಲಾಯಿತು. 

ಪಥ ಸಂಚಲನದಲ್ಲಿ ಡಿ.ವೈ.ಎಸ್.ಪಿ. ವೆಲೈಂಟನ್ ಡಿಸೋಜ, ಸಿ.ಪಿ.ಐ. ಕೆ.ಎಲ್.ಗಣೇಶ, ಸಬ್ ಇನ್ಸಪೆಕ್ಟರ್ ಕುಸುಮಾಧರ ಸೇರಿದಂತೆ ಇತರ ಸಬ್ ಇನ್ಸಪೆಕ್ಟರ್‍ಗಳು, ಎ.ಎಸ್.ಐ., ಹಾಗೂ ಕೆ.ಎಸ್.ಆರ್.ಪಿ., ಜಿಲ್ಲಾ ಮೀಸಲು ಪಡೆ, ಸಿವಿಲ್ ಪೊಲೀಸ್ ಸೇರಿದಂತೆ 150ಕ್ಕೂ ಹೆಚ್ಚು ಸಿಬ್ಬಂದಿಗಳು ಭಾಗವಹಿಸಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...