ನಮ್ಮ ಸೈನಿಕರ ಶವಗಳ ಮೇಲೆ 2019ರ ಲೋಕಸಭೆ ಚುನಾವಣೆ ನಡೆದಿತ್ತು; ಸತ್ಯಪಾಲ್ ಮಲಿಕ್

Source: Vb | By I.G. Bhatkali | Published on 23rd May 2023, 7:43 AM | National News |

ಜೈಪುರ: ಪುಲ್ವಾಮ ದಾಳಿ ಘಟನೆ ಕುರಿತಂತೆ ಕೇಂದ್ರ ಸರಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಜಮ್ಮು ಹಾಗೂ ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್, 2019ರ ಲೋಕಸಭಾ ಚುನಾವಣೆಯನ್ನು “ನಮ್ಮ ಯೋಧರ ಶವಗಳನ್ನು ಮುಂದಿಟ್ಟುಕೊಂಡು ನಡೆಸಲಾಯಿತು” ಎಂದಿದ್ದಾರೆ.

ಘಟನೆಯ ನಂತರ ದಾಳಿಯ ಬಗ್ಗೆ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದೆ. ಆದರೆ, ಅವರು ಮೌನವಾಗಿರುವಂತೆ ತಿಳಿಸಿದರು ಎಂದು ಸತ್ಯಪಾಲ್ ಮಲಿಕ್ ಆರೋಪಿಸಿದ್ದಾರೆ.

“ಈ ಘಟನೆಯ ಬಗ್ಗೆ ಯಾವುದೇ ತನಿಖೆ ನಡೆಯಲಿಲ್ಲ. ಒಂದು ವೇಳೆ ತನಿಖೆ ನಡೆದಿದ್ದರೆ, ಆಗಿನ ಗೃಹ ಸಚಿವರಾಗಿದ್ದ ರಾಜನಾಥ್ ಸಿಂಗ್ ಅವರು ರಾಜೀನಾಮೆ ನೀಡಬೇಕಾಗುತ್ತಿತ್ತು. ಅನೇಕ ಅಧಿಕಾರಿಗಳು ಜೈಲು ಪಾಲಾಗುತ್ತಿದ್ದರು ಹಾಗೂ ದೊಡ್ಡ ವಿವಾದ ಉಂಟಾಗುತ್ತಿತ್ತು' ಎಂದು ಆಲ್ವಾರ್ ಜಿಲ್ಲೆಯ ಬನ್ಸರ್‌ನಲ್ಲಿ ರವಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿದರು.

ರಾಜ್ಯ ಲಡಾಖ್, ಜಮ್ಮು ಹಾಗೂ ಕಾಶ್ಮೀರ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಗೊಳ್ಳುವ ಮೊದಲು ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರು ಜಮ್ಮು ಹಾಗೂ ಕಾಶ್ಮೀರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದರು.

2019 ಫೆಬ್ರವರಿ 14ರಂದು ಪುಲ್ವಾಮ ದಾಳಿ ನಡೆದ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರು ಜಿಮ್‌ ಕಾರ್ಬೆಟ್ ರಾಷ್ಟ್ರೀಯ ಉದ್ಯಾನದಲ್ಲಿ ಶೂಟಿಂಗ್‌ನಲ್ಲಿ ತೊಡಗಿದ್ದರು ಎಂದು ಮಲಿಕ್ ಆರೋಪಿಸಿದ್ದಾರೆ.

ಅವರು ಅಲ್ಲಿಂದ ಹೊರ ಬಂದ ಬಳಿಕ ನಾನು ಅವರಿಂದ (ಮೋದಿ)ಕರೆ ಸ್ವೀಕರಿಸಿದೆ ನಮ್ಮ ಸೈನಿಕರು ಸಾವನ್ನಪ್ಪಿದ್ದಾರೆ. ನಮ್ಮ ತಪ್ಪಿನಿಂದ ಅವರು ಸಾವನ್ನಪ್ಪಿದ್ದಾರೆ ಎಂದು ನಾನು ಅವರಿಗೆ ಹೇಳಿದ್ದೆ. ಆದರೆ, ಅವರು ನನಗೆ ಮೌನವಾಗಿರು ವಂತೆ ತಿಳಿಸಿದರು ಎಂದು ಮಲಿಕ್ ತಿಳಿಸಿದ್ದಾರೆ.

ಅದಾನಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ಮಲಿಕ್, ಅದಾನಿ ಅವರು ಕೇವಲ ಮೂರು ವರ್ಷಗಳಲ್ಲಿ ಸಾಕಷ್ಟು ಸಂಪತ್ತು ಸಂಗ್ರಹಿಸಿದ್ದಾರೆ. ಈ ಅವಧಿಯಲ್ಲಿ ತಮ್ಮ ಸಂಪತ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವೇ ಎಂದು ಅಲ್ಲಿ ಪಾಲ್ಗೊಂಡಿದ್ದವರನ್ನು ಪ್ರಶ್ನಿಸಿದರು.

ಅದಾನಿ ಅವರು 20 ಸಾವಿರ ಕೋ.ರೂ. ಸಂಗ್ರಹಿಸಿದ್ದಾರೆ. ಅದು ಎಲ್ಲಿಂದ ಬಂತು ಎಂದು ಸರಕಾರ ತಿಳಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಪ್ರಶ್ನಿಸಿದ್ದರು ಎಂದು ಅವರು ತಿಳಿಸಿದರು.

“ಇದಕ್ಕೆ ಪ್ರಧಾನಿಗೆ ಉತ್ತರಿಸಲು ಸಾಧ್ಯವಾಗಲಿಲ್ಲ. ಅವರು ಎರಡು ದಿನಗಳ ಕಾಲ ಮಾತನಾಡಿದರು. ಆದರೆ, ಇದೊಂದು ವಿಚಾರಕ್ಕೆ ಉತ್ತರಿಸಲು ಅವರಿಗೆ ಸಾಧ್ಯವಾಗಲಿಲ್ಲ. ಏಕೆಂದರೆ ಅವರಲ್ಲಿ ಉತ್ತರ ಇರಲಿಲ್ಲ. ಅದೆಲ್ಲವೂ ಅವರ (ಮೋದಿ) ಹಣ ಎಂದು ನಾನು ಹೇಳುತ್ತಿದ್ದೇನೆ ಎಂದು ಮಲಿಕ್ ತಿಳಿಸಿದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...