ಜಿಲ್ಲೆಯಲ್ಲಿ 208ಕೋಟಿ ರೂ. ಸಾಲಮನ್ನಾ ಅರ್ಹ ಪಿಂಚಣಿದಾರರಿಗೆ ಪಿಂಚಣಿ ಒದಗಿಸಲು ಕ್ರಮ: ಐವನ್ ಡಿಸೋಜಾ

Source: so news | By MV Bhatkal | Published on 15th June 2019, 10:16 PM | State News | Don't Miss |

ಶಿವಮೊಗ್ಗ: ಜಿಲ್ಲೆಯಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಪಿಂಚಣಿ ಸೌಲಭ್ಯ ಪಡೆಯಲು ಸಾಧ್ಯವಾಗದಿರುವ 1483 ಪಿಂಚಣಿದಾರರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವಿಕರಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಒಟ್ಟು 2,19,631 ಫಲಾನುಭವಿಗಳು ವಿವಿಧ ಯೋಜನೆಗಳ ಅಡಿ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. ಮಂಜೂರಾತಿಗೆ 300ಅರ್ಜಿಗಳು ಬಾಕಿ ಇವೆ. ಕೆ2 ತಾಂತ್ರಿಕ ಸಮಸ್ಯೆಯಿಂದಾಗಿ 1483 ಮಂದಿಗೆ ಪಿಂಚಣಿ ನೀಡಲು ಸಾಧ್ಯವಾಗುತ್ತಿಲ್ಲ. ಪಿಂಚಣಿಯನ್ನೆ ಅವಲಂಬಿಸಿರುವ ಇಂತಹ ಫಲಾನುಭವಿಗಳಿಗೆ ಆದಷ್ಟು ಬೇಗನೆ ಸೌಲಭ್ಯ ಒದಗಿಸಲು ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಅವರು ತಿಳಿಸಿದರು.
ಅಂತ್ಯಸಂಸ್ಕಾರ ಯೋಜನೆ ಅಡಿ ಅನುದಾನ ಕೊರತೆಯಿಂದ ಸಕಾಲದಲ್ಲಿ ಸೌಲಭ್ಯ ಒದಗಿಸಲು ಸಾಧ್ಯವಾಗದೇ 4591 ಅರ್ಜಿಗಳು ಜಿಲ್ಲೆಯಲ್ಲಿ ಬಾಕಿ ಇದೆ. ಇದನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಕಾಲ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆ ನಿರಂತರವಾಗಿ ಪ್ರಥಮ ಸ್ಥಾನ ಉಳಿಸಿಕೊಂಡು ಬಂದಿದೆ. ನಿಗದಿತ ವೇಳೆಯಲ್ಲಿ ಸರ್ಕಾರಿ ಸೇವೆ ಒದಗಿಸಲಾಗುತ್ತಿರುವುದಕ್ಕೆ ಇದು ಸಾಕ್ಷಿ. ಇದನ್ನು ಉಳಿಸಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯಡಿ 73960 ಫಲಾನುಭವಿಗಳಿಗೆ, ವೃದ್ಧಾಪ್ಯ ವೇತನ ಯೋಜನೆಯಡಿ 20864, ಅಂಗವಿಕಲ ಯೋಜನೆಯಡಿ 28333, ವಿಧವಾ ವೇತನ ಯೋಜನೆಯಡಿ 51794, ಮನಸ್ವಿನಿ ಯೋಜನೆಯಡಿ 3504, ಮೈತ್ರಿ ಯೋಜನೆಯಡಿ 22, ರಾಷ್ಟಿಯ ಕುಟುಂಬ ನೆರವು ಯೋಜನೆಯಡಿ 10744, ಅಂತ್ಯಸಂಸ್ಕಾರ ಯೋಜನೆಯಡಿ 30259, ಆದರ್ಶ ವಿವಾಹ ಯೋಜನೆಯಡಿ 314 ಮಂದಿಗೆ ನೆರವು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದರು.
ಪಿಂಚಣಿ ಅದಾಲತ್: ಮುಂದಿನ ತಿಂಗಳು ಜಿಲ್ಲಾ ಮಟ್ಟದ ಪಿಂಚಣಿ ಅದಾಲತ್ ಆಯೋಜಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ 442ಕಂದಾಯ ಅದಾಲತ್‌ಗಳನ್ನು ಮಾಡಲಾಗಿದ್ದು, 54910 ಅರ್ಜಿಗಳ ಪೈಕಿ 54818 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಕಂದಾಯ ಅದಾಲತ್‌ಗಳನ್ನು ನಿರಂತರವಾಗಿ ಆಯೋಜಿಸಲು ಸೂಚಿಸಲಾಗಿದೆ ಎಂದು ಅವರು ಬಳಿಕ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ರೈತರ ಸಾಲಮನ್ನಾ: ಜಿಲ್ಲೆಯಲ್ಲಿ ರೈತರ ಸಾಲಮನ್ನಾ ಯೋಜನೆಯಡಿ ವಾಣಿಜ್ಯ ಬ್ಯಾಂಕುಗಳಲ್ಲಿ ಬೆಳೆಸಾಲ ಪಡೆದ 55171 ರೈತರ 943.49ಕೋಟಿ ರೂ. ಸಾಲದ ಪೈಕಿ ಈಗಾಗಲೇ 130.31ಕೋಟಿ ರೂ. ಸಾಲಮನ್ನಾ ಮಾಡಲಾಗಿದೆ. ಇನ್ನು 812.83ಕೋಟಿ ರೂ. ಬಿಡುಗಡೆಗೆ ಬಾಕಿಯಿದ್ದು, ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. 
ಸಹಕಾರ ವಲಯದಲ್ಲಿ 33947 ರೈತರ 139.39ಕೋಟಿ ರೂ. ಸಾಲದ ಪೈಕಿ 77.56ಕೋಟಿ ರೂ. ಸಾಲಮನ್ನಾ ಮಾಡಲಾಗಿದ್ದು, 61.83ಕೋಟಿ ರೂ. ಬಿಡುಗಡೆಗೆ ಬಾಕಿಯಿದೆ ಎಂದು ಅವರು ಹೇಳಿದರು.
ಬಗರ್‌ಹುಕುಂ ಭೂಮಿ ಮಂಜೂರು: ಜಿಲ್ಲೆಯಲ್ಲಿ ಬಗರ್‌ಹುಕುಂ ಯೋಜನೆಯಡಿ ರಿಯಾಯಿತಿ ದರದಲ್ಲಿ ಅರ್ಹರಿಗೆ 4.38 ಎಕ್ರೆವರೆಗೆ ಒಟ್ಟು 78ಸಾವಿರ ಎಕ್ರೆ ಭೂಮಿ ಮಂಜೂರು ಮಾಡಿರುವುದು ದಾಖಲೆಯಾಗಿದೆ. ಅರಣ್ಯ ಭೂಮಿ ಸಮಸ್ಯೆಯಿಂದಾಗಿ 942 ಗ್ರಾಮಗಳಲ್ಲಿ ಸ್ಮಶಾನ ಭೂಮಿ ಇಲ್ಲದಿರುವುದು ಗಮನಕ್ಕೆ ಬಂದಿದ್ದು, ಇದನ್ನು ಬಗೆಹರಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಜಾರಿಯಲ್ಲಿರುವ ಪ್ರಾಪರ್ಟಿ ಕಾರ್ಡ್ ಯೋಜನೆಯಿಂದ ಸಮಸ್ಯೆಗಳು ಉಂಟಾಗಿದ್ದು, ಈ ಯೋಜನೆಯನ್ನು ಕಡ್ಡಾಯಗೊಳಿಸದಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಕೆ.ಅನುರಾಧ, ಶಿವಮೊಗ್ಗ ಎಸಿ ಪ್ರಕಾಶ್, ಸಾಗರ ಎಸಿ ದರ್ಶನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...