ದೇಶದಲ್ಲಿ ಒಂದೇ ದಿನ 22,752 ಸೋಂಕು: ಸತತ 6ನೇ ದಿನ 20 ಸಾವಿರಕ್ಕೂ ಅಧಿಕ ಮಂದಿಗೆ ವೈರಸ್; ಒಟ್ಟು ಸೋಂಕಿತರ ಸಂಖ್ಯೆ 7.42 ಲಕ್ಷ

Source: ANI | Published on 8th July 2020, 7:21 PM | National News | Don't Miss |

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್'ನ ನಾಗಾಲೋಟ ಮುಂದುವರೆದಿದೆ. ಬುಧವಾರ 22,752 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 7,42,417ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 
ಈ ಮೂಲಕ ಸತತ 6ನೇ ದಿನವೂ 20 ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣಗಳು ದಾಖಲಾದಂತಾಗಿವೆ. ಇದೇ ವೇಳೆ ಕೊರೋನಾಗೆ ಒಂದೇ ದಿನ 482 ಮಂದಿ ಬಲಿಯಾಗುವುದರೊಂದಿಗೆ ಮೃತರ ಸಂಖ್ಯೆ 20,642ಕ್ಕೆ ಏರಿಕೆ ಕಂಡಿದೆ. 
ಇದೇ ವೇಳೆ ಮಹಾರಾಷ್ಟ್ರದಲ್ಲಿ 5,134 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 2,17,121ಕ್ಕೆ ಏರಿಕೆಯಾಗಿದೆ. ಇನ್ನು ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 1,18,594ಕ್ಕೆ ಹಾಗೂ ದೆಹಲಿಯಲ್ಲಿ 102831ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲೆಡೆ ಒಂದೇ ದಿನ 17802 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ವರೆಗೆ ಒಟ್ಟು 454175 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 
ಭಾರತದಲ್ಲಿ ಕೊರೋನಾವೈರಸ್ ಪ್ರಕರಣಗಳು 7 ಲಕ್ಷ ಹಾಗೂ ಸಾವಿನ ಸಂಖ್ಯೆ 20 ಸಾವಿರ ಗಡಿ ದಾಟಿರುವ ಹೊರತಾಗಿಯೂ ಪ್ರತಿ 10 ಲಕ್ಷ ಜನಸಂಖ್ಯೆಗೆ ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ವಿಶ್ವದಲ್ಲೇ ಕಡಿಮೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 
ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 505.37 ಮಂದಿ ಕೊರೋನಾಕ್ಕೆ ತುತ್ತಾಗಿದ್ದಾರೆ. ಆದರೆ, ಜಾಗತಿಕ ಸರಾಸರಿ 10 ಲಕ್ಷ ಜನಸಂಖ್ಯೆಗೆ 1,453.25ರಷ್ಟಿದೆ. ಇದೇ ವೇಳೆ ಚಿಲಿಯಲ್ಲಿ 10 ಲಕ್ಷಕ್ಕೆ 15,459,8 ಜನರಿಗೆ ಕೊರೋನಾ ಸೋಂಕು ತಗುಲಿದ್ದರೆ, ಪೆರುವಿನಲ್ಲಿ 9,070 ಜನರು ಸೋಂಕಿಗೆ ತುತ್ತಾಗಿದ್ದಾರೆ. ಅದೇ ರೀತಿ ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 14.27 ಸಾವು ಸಂಭವಿಸುತ್ತಿದೆ. ಆದರೆ, ಜಾಗತಿಕವಾಗಿ 68.29 ಮಂದಿ ಸಾವಿಗೀಡಾಗುತ್ತಿದ್ದಾರೆಂದು ತಿಳಿಸಿದೆ. 

 

 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...