ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

Source: The New Indian Express | By MV Bhatkal | Published on 10th October 2021, 5:18 PM | National News | Don't Miss |

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ದೋಹಾದಿಂದ ಭಾರತಕ್ಕೆ ಬಂದಿಳಿದಿದ್ದ. ಇದರೊಂದಿಗೆ ಇದೇ ವಿಮಾನನಿಲ್ದಾಣದಲ್ಲಿ ಈ ವಾರ ಚಿನ್ನ ಕಳ್ಳಸಾಗಣೆಗೆ ಯತ್ನಿಸಿದ ೫ನೇ ಪ್ರಕರಣ ಬೆಳಕಿಗೆ ಬಂದಂತಾಗಿದೆ.
ಖಚಿತ ಮಾಹಿತಿ ಆಧಾರದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಆರೋಪಿ ಚಲನವಲನಗಳ ಮೇಲೆ ನಿಗಾ ಇರಿಸಿ ತಪಾಸಣೆಗೊಳಪಡಿಸಿದ್ದಾರೆ. ಆತನ ಲಗೇಜು ಚೆಕ್ ಮಾಡಿದಾಗ ಅದರಲ್ಲಿ ಫೇಸ್ ಕ್ರೀಮುಗಳ ಬಾಕ್ಸುಗಳು ಪತ್ತೆಯಾಗಿದ್ದವು. ಅದರೊಳಗೆ ಚಿನ್ನ ಮತ್ತು ಬೆಳ್ಳಿಯನ್ನು ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು. 
525.25 ಗ್ರಾಂ ಚಿನ್ನ ಮತ್ತು 28 ಗ್ರಾಂ ಬೆಳ್ಳಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅದರ ಮೌಲ್ಯ 24 ಲಕ್ಷ ರೂ. 1 ಕೆ.ಜಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿತ್ತು ಎನ್ನುವುದು ಗಮನಾರ್ಹ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...