ಮಂಡ್ಯ: ನಾಲೆಗೆ ಧುಮುಕಿದ ಖಾಸಗಿ ಬಸ್; ೨೦ಕ್ಕೂ ಅಧಿಕ ಸಾವು

Source: sonews | By Staff Correspondent | Published on 24th November 2018, 5:18 PM | Coastal News | State News | National News | Don't Miss |

ಮಂಡ್ಯ:  ಖಾಸಗಿ ಬಸ್ಸೊಂದು ನಾಲೆಗೆ ಧುಮುಕಿದ ಪರಿಣಾಮ ೨೦ಕ್ಕೂ ಅಧಿಕ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ಶನಿವಾರ ನಡೆದಿದ್ದು ಸಾವುನೋವುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ರಾಜಕುಮಾರ್ ಎಂಬ ಖಾಸಗಿ ಬಸ್ಸೊಂದು ನಾಲೆಗೆ ಉರುಳಿ ಬಿದ್ದ  ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಬಸ್ಸಿನಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ.ಮೃತದೇಹಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ 20 ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಮಂಡ್ಯ, ಮೈಸೂರಿನಿಂದ ಆರು ಅಗ್ನಿಶಾಮಕ‌ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುತ್ತ ಮುತ್ತಲ ಗ್ರಾಮಸ್ಥರೇ ಕಾರ್ಯಾಚರಣೆಗೆ ಕೈಜೋಡಿಸಿದ್ದಾರೆ.

ರಸ್ತೆಯ ಪಕ್ಕ ಯಾವುದೇ ತಡೆಗೋಡೆ ಇಲ್ಲದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಾಗಿದೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...