ಭಟ್ಕಳದ ಅಂಜುಮನ್ ಪಿಯು ಕಾಲೇಜಿನಲ್ಲಿ ಮೊದಲ ಬಾರಿ ನಡೆಯುತ್ತಿದೆ ಸಿಇಟಿ ಪರೀಕ್ಷೆ; 253 ವಿದ್ಯಾರ್ಥಿಗಳು ನೋಂದಣಿ

Source: sonews | By Staff Correspondent | Published on 29th July 2020, 3:43 PM | Coastal News | Don't Miss |

ಭಟ್ಕಲ್: 2020-21ರ ಶೈಕ್ಷಣಿಕ ವರ್ಷದ ವೈದ್ಯಕೀಯ, ದಂತ, ಆಯುರ್ವೇದ, ಹೋಮಿಯೋಪತಿ, ಯುನಾನಿ, ಪ್ರಕೃತಿಚಿಕಿತ್ಸೆ ಮತ್ತು ಯೋಗ, ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ  ಜುಲೈ 30ರಂದು ರಾಜ್ಯಾದ್ಯಂತ ವಿ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗಳನ್ನು ಎದುರಿಸಲಿದ್ದು ಭಟ್ಕಳ ದಲ್ಲಿ ಪ್ರಥಮ ಬಾರಿಗೆ 253 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಅಂಜುಮನ್ ಪಿಯು ಕಾಲೇಜಿನ ಪ್ರಾಂಶುಪಾಲ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷಾ ಕೇಂದ್ರದ ಮುಖ್ಯಸ್ಥ ಮುಹಮ್ಮದ್ ಯೂಸೂಫ್ ಕೋಲಾ ಸಾಹಿಲ್ ಆನ್ ಲೈನ್ ಗೆ ಮಾಹಿತಿ ನೀಡಿದ್ದಾರೆ. 

ಮೊದಲ ಬಾರಿಗೆ ಭಟ್ಕಳದ ಅಂಜುಮಾನ್ ಪಿಯು ಕಾಲೇಜಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಇದರಲ್ಲಿ ತಾಲ್ಲೂಕಿನ ಒಟ್ಟು 253 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಕೋವಿಡ್-19 ರ ಈ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಪರೀಕ್ಷೆಗೆ ಎರಡು ಗಂಟೆಗಳ ಮೊದಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ಅವರು ಹೇಳಿದರು. ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಅವಕಾಶವಿದ್ದು ಫೇಸ್ ಮಾಸ್ಕ್ ಧರಿಸಬೇಕು, ಕುಡಿಯುವ ನೀರಿನ ಬಾಟಲಿಗಳು ಮತ್ತು ಮನೆಯಿಂದ ತರಬೇಕು ಎಂದು ಅವರು ಹೇಳಿದರು.

ನಾವು ಎಲ್ಲಾ ತರಗತಿ ಕೊಠಡಿಗಳನ್ನು ಸ್ವಚ್ಚಗೊಳಿಸಿದ್ದೇವೆ. ರೋಗಲಕ್ಷಣಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯನ್ನು  ಕಾಯ್ದಿರಿಸಲಾಗಿದೆ. ಹಿರಿಯ ಅಧಿಕಾರಿಗಳನ್ನು ವೀಕ್ಷಕರಾಗಿ ನಿಯೋಜಿಸಲಾಗಿದೆ, ಮತ್ತು ಸಿಇಟಿಯನ್ನು ಸುಗಮವಾಗಿ ನಡೆಸಲು ಸಮಿತಿಗಳನ್ನು ರಚಿಸಲಾಗಿದೆ. ಪರೀಕ್ಷೆಯಲ್ಲಿನ ನಕಲು ಹಾಗೂ ದುಷ್ಕೃತ್ಯಗಳನ್ನು ತಡೆಗಟ್ಟಲು ಪ್ರತಿ ಕೇಂದ್ರಕ್ಕೆ ವಿಶೇಷ ಫ್ಲೈಯಿಂಗ್ ಸ್ಕ್ವಾಡ್ ಅನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

 

Read These Next