ಭಟ್ಕಳದಲ್ಲಿ ಮತ್ತೆ 26 ಕೊರೊನಾ ಪಾಸಿಟಿವ್ ಪ್ರಕರಣ; ಶಿರಾಲಿ ಸೆಂಟ್ ಥಾಮಸ್ ಶಾಲೆಗೆ ರಜೆ ಘೋಷಣೆ

Source: S O News | By I.G. Bhatkali | Published on 18th January 2022, 3:11 PM | Coastal News |

ಭಟ್ಕಳ: ತಾಲೂಕಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಏರಿಕೆಯಾಗುತ್ತಲೇ ಇದ್ದು, ಸೋಮವಾರ ಮತ್ತೆ 26 ಹೊಸ ಪ್ರಕರಣಗಳು ದಾಖಲಾಗಿವೆ. 

ತಾಲೂಕಿನ ಬೆಳಕೆ ಸರಕಾರಿ ಪ್ರೌಢಶಾಲೆಯ 3 ಹಾಗೂ ಶಿರಾಲಿ ಸಿದ್ಧಾರ್ಥ ಶಾಲೆಯ 4 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಶಿರಾಲಿ ಕೋಟೇಬಾಗಿಲ್ ಸೆಂಟ್ ಥಾಮಸ್ ಶಾಲೆಯಲ್ಲಿ ಮತ್ತೆ ಓರ್ವ ವಿದ್ಯಾರ್ಥಿ ಕೊರೊನಾ ಸೋಂಕಿಗೆ ಒಳಗಾಗಿದ್ದು, ಈ ಶಾಲೆಯಲ್ಲಿ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಸೋಂಕಿತ ವಿದ್ಯಾರ್ಥಿಗಳು ಇರುವ ಶಿರಾಲಿ ಸೆಂಟ್ ಥಾಮಸ್ ಶಾಲೆಗೆ ಜ.17ರಿಂದ 22ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಶಾಲೆಗಳಿಗೆ 1 ವಾರ ನಿರ್ಣಾಯಕ:
ತಾಲೂಕಿನ ವಿವಿಧ ಶಾಲೆಗಳಲ್ಲಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ನಿಗಾ ವಹಿಸಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳು ಇರುವ ಶಾಲೆಗಳ ಬಗ್ಗೆ ಮಾಹಿತಿ ತರಿಸಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳಿಗೆ ರವಾನಿಸಲಾಗಿದೆ. ಮುಂದಿನ 1 ವಾರ ಭಟ್ಕಳ ತಾಲೂಕಿನ ಶಾಲೆಗಳ ಪಾಲಿಗೆ ನಿರ್ಣಾಯವಾಗಿದ್ದು, ಒಂದೆರಡು ವಾರಗಳ ನಂತರ ಕೊರೊನಾ ಸೋಂಕು ಪ್ರಮಾಣ ಇಳಿ ಮುಖವಾಗುವ ಸಾಧ್ಯತೆಯ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. 
   

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...