ಈವರೆಗೂ ರಾಜ್ಯಗಳಿಗೆ 26 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಕೆ- ಕೇಂದ್ರ ಸರ್ಕಾರ

Source: ANI | By MV Bhatkal | Published on 13th June 2021, 6:19 PM | National News | Don't Miss |

ನವದೆಹಲಿ: ಈವರೆಗೂ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 26 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆಯನ್ನು ಕೇಂದ್ರದಿಂದ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.
ಭಾರತ ಸರ್ಕಾರದ ಉಚಿತ ದರ ಹಾಗೂ ರಾಜ್ಯಗಳಿಂದ ನೇರ ಖರೀದಿ ಹಂತದಲ್ಲಿ ಈವರೆಗೂ ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ 26,64,84,350 ಡೋಸ್ ಲಸಿಕೆಯನ್ನು ಪೂರೈಕೆ ಮಾಡಲಾಗಿದೆ. ಈ ಪೈಕಿ ವ್ಯರ್ಥ ಸೇರಿದಂತೆ ಒಟ್ಟಾರೇ 25,12,66,637 ಡೋಸ್ ಬಳಕೆಯಾಗಿರುವುದಾಗಿ ಅಧಿಕೃತ ಮಾಹಿತಿ ನೀಡಲಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, 1,53,79,233 (1.53 ಕೋಟಿ) ಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ಈಗಲೂ ಕೇಂದ್ರಾಡಳಿತ ಪ್ರದೇಶ ಹಾಗೂ ರಾಜ್ಯಗಳಲ್ಲಿದೆ. 4 ಲಕ್ಷಕ್ಕೂ ಹೆಚ್ಚು ಡೋಸ್ ಪೈಪ್ ಲೈನ್ ನಲ್ಲಿದ್ದು, ಮುಂದಿನ ಮೂರು ದಿನಗಳೊಳಗೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಪಡೆಯಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 
ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕೆ ಅಭಿಯಾನದಡಿ ಈವರೆಗೂ ಸುಮಾರು 25,31,95,048 ಡೋಸ್ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...