ಬೆಂಗಳೂರು: 26 ಮೃತದೇಹಗಳ ಸಾಮೂಹಿಕ ಅಂತ್ಯಸಂಸ್ಕಾರ

Source: VB | By S O News | Published on 1st May 2021, 12:57 PM | State News |

ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನ ಸೋಂಕಿ ನಿಂದಾಗಿ ನೂರಾರು ಜನರು ಸಾವನ್ನಪ್ಪುತ್ತಿದ್ದು, ಅಂತ್ಯಸಂಸ್ಕಾರ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಹೀಗಾಗಿ, ರಾಜ್ಯ ಸರಕಾರದಿಂದ ಮೃತದೇಹಗಳ ಅಂತ್ಯ ಸಂಸ್ಕಾರಕ್ಕಾಗಿ ನಗರದ ಹೊರವಲಯದಲ್ಲಿರುವ ತಾವರೆಕೆರೆ ಸಮೀಪ ತಾತ್ಕಾಲಿಕ ರುದ್ರಭೂಮಿ ಸ್ಥಾಪಿಸಲಾಗಿದ್ದು, ಇಲ್ಲಿಯೇ ಕೊರೋನ ಮೃತದೇಹಗಳನ್ನು ದಹನ ಮಾಡಲಾಗುತ್ತಿದೆ. ಶುಕ್ರವಾರ ಒಂದೇ ದಿನ, ಒಂದೇ ಬಾರಿಗೆ 26 ಮೃತದೇಹಗಳನ್ನು ಸಾಮೂಹಿಕವಾಗಿ ದಹನ ಮಾಡಲಾಯಿತು.

ಸಾಮೂಹಿಕವಾಗಿ ಮೃತದೇಹಗಳ ಅಂತ್ಯಸಂಸ್ಕಾರ ನಡೆಯುತ್ತಿದ್ದಾಗ ಕುಟುಂಬಸ್ಥರು ಹಾಗೂ ಸಂಬಂಧಿಕರು ದೂರದಿಂದಲೇ ನಿಂತು ನೋಡಬೇಕಾದಂತಹ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಂಪ್ರತಿ ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇದ್ದು ರಾಜಧಾನಿಯ ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಸಾಮೂಹಿಕವಾಗಿ ಮೃತದೇಹಗಳ ಅಂತ್ಯಸಂಸ್ಕಾರ ನಡೆಯುತ್ತಿದ್ದಾಗ ಶವಗಳ ಸಂಬಂಧಿಕರನ್ನು ರುದ್ರಭೂಮಿ ಬಳಿ ಇದ್ದ ಸಿಬ್ಬಂದಿ ಮೃತದೇಹಗಳ ಬಳಿ ಹೋಗಲು ಅವಕಾಶ ನೀಡಲಿಲ್ಲ. ಕೆಲವರು ಮಾತ್ರ ಪಿಪಿಇ ಕಿಟ್ ಗಳನ್ನು ಧರಿಸಿ ಮೃತದೇಹಗಳನ್ನು ನೋಡಿಕೊಂಡು ಬಂದರೆ, ಇನ್ನು ಕೆಲವರು ಮೃತದೇಹಗಳ ಅಂತ್ಯಸಂಸ್ಕಾರವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯುವ ದೃಶ್ಯ ಅಲ್ಲಲ್ಲಿ ಕಂಡು ಬಂದಿತು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...