ರಾಯಣ್ಣVs ಶಿವಾಜಿ ರೂಪ ಪಡೆದ ಸಂಘರ್ಷ; ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸ: ಶಿವಸೇನೆ, ಎಂಇಎಸ್ ವಿರುದ್ಧ ಭುಗಿಲೆದ್ದ ಆಕ್ರೋಶ

Source: VB | By I.G. Bhatkali | Published on 19th December 2021, 7:12 AM | State News | National News |

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಕನ್ನಡ ಧ್ವಜ ಸುಟ್ಟ ಬೆನ್ನಲ್ಲೇ ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಅವಮಾನ ಹಾಗೂ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ ಘಟನೆ ನಡೆದಿದ್ದು, ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ.

ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ವೃತ್ತದ ಬಳಿ ಶಿವಾಜಿ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದಿರುವುದನ್ನು ಖಂಡಿಸಿ ಶುಕ್ರವಾರ ರಾತ್ರಿ ಬೆಳಗಾವಿಯಲ್ಲಿ ಎಂಇಎಸ್‌ನ ನೂರಾರು ಕಾರ್ಯಕರ್ತರು ಏಕಾಏಕಿ ಪ್ರತಿಭಟನೆ ನಡೆಸಿದರು.

ಈ ವೇಳೆ ಕಲ್ಲು ತೂರಾಟ ನಡೆದಿದ್ದು ಪೊಲೀಸರು, ವಿಧಾನಮಂಡಲ ಅಧಿವೇಶ ನಕ್ಕೆ ಆಗಮಿಸಿದ್ದ ಸರಕಾರಿ ಅಧಿಕಾರಿಗಳ ವಾಹನಗಳು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕಲಂ 144ರ ಅನ್ವಯ ನಿಷೇಧಾಜ್ಞೆ ವಿಧಿಸಿದ್ದಾರೆ. ಈ ಮಧ್ಯೆ ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಎಂಇಎಸ್ ಹಾಗೂ ಕನ್ನಡ ಪರ ಸಂಘಟನೆಗಳು ಪರಸ್ಪರ ಪರ-ವಿರೋಧ ಪ್ರತಿಭಟನೆಗಳನ್ನು ಆರಂಭಿಸಿವೆ.

ಎಂಇಎಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಶಿವಾಜಿ ಪ್ರತಿಮೆಗೆ ಹಾಲಿನ ಅಭಿಷೇಕ ನಡೆಸಿದ್ದರೆ, ಮತ್ತೊಂದೆಡೆ ಕನ್ನಡ ಪರ ಸಂಘಟನೆಗಳು ಎಂಇಎಸ್ ಕೃತ್ಯ ಖಂಡಿಸಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿವೆ. ಅಲ್ಲದೇ, ಎಂಇಎಸ್‌ನ ಆಟಾಟೋಪ ಖಂಡಿಸಿ ನಾಳೆಯಿಂದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿವೆ.

ಕನ್ನಡಿಗರನ್ನು ಕೆಣಕುವ ಎಂಇಎಸ್‌ನ ಉದ್ಧಟತನಕ್ಕೆ ಸರಕಾರ ಹಾಗೂ ಪೊಲೀಸ್ ಇಲಾಖೆ ಕಡಿವಾಣ ಹಾಕದಿದ್ದರೆ, ಮುಂದೆ ಆಗುವಂತಹ ಎಲ್ಲಾ ಅವಘಡಗಳಿಗೆ ರಾಜ್ಯ ಸರಕಾರವೇ ಹೊಣೆಯಾಗಲಿದೆ ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಸಿವೆ. ಈ ಮಧ್ಯೆ ಡಿ.20ರವರೆಗೆ ಕಲಂ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ ಘಟನೆಗೆ ಸಂಬಂಧ ಓರ್ವನನ್ನು, ಸರಕಾರಿ ವಾಹನಗಳಿಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 27 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ .ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಮತ್ತಷ್ಟು ಹೆಚ್ಚಿಸಲಾಗಿದೆ. ಸದ್ಯ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ. ನಗರದಲ್ಲಿ ನಿನ್ನೆ ರಾತ್ರಿ ಎಂಇಎಸ್ ಕಾರ್ಯಕರ್ತರು ನಡೆಸಿದ ಕೃತ್ಯ ಖಂಡಿಸಿ, ಕನ್ನಡ ಪರ ಸಂಘ ಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ. ತಪ್ಪಿತಸ್ಥರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಅಲ್ಲದೇ, ಕನ್ನಡ ವಿರೋಧಿ ಚಟುವಟಿಕೆ ನಡೆಸುವ ಎಂಇಎಸ್ ಅನು ನಿಷೇಧಿಸಬೇಕು ಎಂದು ಆಗ್ರಹಿಸಿವೆ.

ಮುಖಂಡರ ಬಂಧನ: ಬೆಳಗಾವಿ ನಗರದಲ್ಲಿ ಪಾದಯಾತ್ರೆ ಮತ್ತು ಪ್ರತಿಭಟನೆ ನಡೆಸಲು ಮುಂದಾಗಿದ್ದ ಕನ್ನಡ ಪರ ಸಂಘಟನೆಗಳ ಹಲವು ಮುಖಂಡರನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆ ಮಾಡಿದ್ದಾರೆ.

ವ್ಯಾಪಕ ಖಂಡನೆ: ಸಂಗೊಳ್ಳಿ ರಾಯಣ್ಣ ಪತ್ರಿಮೆಗೆ ಅಪಮಾನ ಮಾಡಿದ ಕಿಡಿಗೇಡಿಗಳ ಕೃತ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಸಚಿವರು, ಶಾಸಕರು ಸೇರಿದಂತೆ ಇನ್ನಿತರ ಗಣ್ಯರು ಖಂಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಸರಕಾರ ಬದ್ಧವಾಗಿದೆ. ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡೋದು ಅಲ್ಲಿನ ಸರಕಾರದ ಹೊಣೆಯಾಗಿದೆ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು ಮತ್ತು ಇಂತಹ ಕೃತ್ಯಗಳಿಗೆ ಕುಮ್ಮಕ್ಕು ನೀಡಬಾರದು ಎಂದು ಮುಖಂಡರು ಕೋರಿದ್ದಾರೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...