ನೇತ್ರಾಣಿ ದ್ವೀಪದ ಬಳಿ 28ಮೀನುಗಾರರ ರಕ್ಷಣೆ

Source: sonews | By Staff Correspondent | Published on 11th October 2019, 11:01 PM | Coastal News | Don't Miss |

ಭಟ್ಕಳ: ತಾಲೂಕಿನ ನೇತ್ರಾಣಿ ಗುಡ್ಡದ ಸಮೀಪ ಬೋಟೋಂದಕ್ಕೆ ನೀರು ನುಗ್ಗಿ ಅಪಾಯದಲ್ಲಿರುವುದನ್ನು ಅರಿತು ತಕ್ಷಣ ಇನ್ನೋಂದು ಬೋಟಿನವರು ಮೀನುಗಾರರನ್ನು ರಕ್ಷಿಸಿರುವ ಘಟನೆ ವರದಿಯಾಗಿದೆ. 

ಮೀನುಗಾರಿಕೆಗೆ ತೆರಳಿದ್ದ ಶ್ರೀ ಮೂಕಾಂಬಿಕಾ ಎನ್ನುವ ಬೋಟು ಮೀನುಗಾರಿಕೆಯನ್ನು ಮಾಡುತ್ತಿರುವಾಗ ನೇತ್ರಾಣಿಯ ಸಮೀಪ ಮೀನುಗಾರಿಕೆ ಮಾಡುತ್ತಿರುವಾಗ ಬೋಟಿನ ಒಳಗಡೆಯಲ್ಲಿ ನೀರು ಬರಲಾರಂಭಿಸಿದ್ದನ್ನು ಗಮನಿಸಿದ ಮೀನುಗಾರರು ಹತ್ತಿರದಲ್ಲಿಯೇ ಮೀನುಗಾರಿಕೆ ಮಾಡುತ್ತಿರುವ ಇತರ ಬೋಟುಗಳಿಗೆ ತಿಳಿಸಿದ್ದು ತಕ್ಷಣ ಇವರಲ್ಲಿಗೆ ಬಂದ ಬೋಟುಗಳು ಇವರನ್ನು ರಕ್ಷಿಸಿದೆ. ಬೋಟಿನಲ್ಲಿ ಒಟ್ಟು 28 ಮೀನುಗಾರರಿದ್ದು ಬೇರೆ ಬೇರೆ ಮೀನುಗಾರಿಕಾ ಬೋಟುಗಳಲ್ಲಿ ಭಟ್ಕಳ ಬಂದರಕ್ಕೆ ಬಂದಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ.  (ಶಿತಾಲಿ ನವದುರ್ಗ) ಶ್ರೀ ಮೂಕಾಂಬಿಕಾ ಮೀನುಗಾರಿಕಾ ಬೋಟು ಕೂಡಾ ಭಟ್ಕಳ ಬಂದರಕ್ಕೆ ಬಂದು ತಲುಪಿರುವ ಕುರಿತೂ ವರದಿಯಾಗಿದೆ. ಬೋಟು ಗಂಗೊಳ್ಳಿಯ ಮಧುಕರ ಪೂಜಾರಿ ಎನ್ನುವವರಿಗೆ ಸೇರಿದ್ದೆನ್ನಲಾಗಿದ್ದು ಭಟ್ಕಳದಿಂದ ಮೀನುಗಾರಿಕೆಗೆ ತೆಗೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ. 

ಸುದ್ದಿ ತಿಳಿದ ತಕ್ಷಣ ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಬಂದರಕ್ಕೆ ಹೋಗಿದ್ದು ಮಾಹಿತಿಯ್ನನು ಪಡೆದುಕೊಂಡು ಬೋಟು ಹಾಗೂ ಕಲಾಸಿಗಳ ರಕ್ಷಣೆಯ ಕುರಿತು ಕ್ರಮ ಕೈಗೊಂಡಿದ್ದಾರೆ. 


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...