ರಾಜ್ಯದಲ್ಲಿ ಈವರೆಗೆ 2,856 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ, 225 ಮಂದಿ ಸಾವು

Source: PTI | By MV Bhatkal | Published on 20th June 2021, 11:50 AM | National News |

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 2,856 ಕಪ್ಪು ಶಿಲೀಂಧ್ರ (ಬ್ಲ್ಯಾಕ್‌ ಫಂಗಸ್‌) ಪ್ರಕರಣಗಳು ಪತ್ತೆಯಾಗಿದ್ದು, 225 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಆರೋಗ್ಯ ಇಲಾಖೆ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ರಾಜ್ಯದಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ 2,316 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದುವರೆಗೆ 191 ಮಂದಿ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಗರಿಷ್ಠ 959 ಸೋಂಕಿತರಿದ್ದು, ಅವರಲ್ಲಿ 825 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 49 ಮಂದಿ ಗುಣಮುಖರಾಗಿದ್ದಾರೆ. 72 ಮಂದಿ ಮೃತಪಟ್ಟಿದ್ದಾರೆ.
ಧಾರವಾಡದಲ್ಲಿ 229, ಕಲಬುರ್ಗಿಯಲ್ಲಿ 168, ಬೆಳಗಾವಿಯಲ್ಲಿ 159, ವಿಜಯಪುರದಲ್ಲಿ 130, ಚಿತ್ರದುರ್ಗದಲ್ಲಿ 126, ಬಳ್ಳಾರಿಯಲ್ಲಿ 110, ಬಾಗಲಕೋಟೆಯಲ್ಲಿ 109, ಮೈಸೂರು ಮತ್ತು ರಾಯಚೂರಿನಲ್ಲಿ ತಲಾ 98 ಪ್ರಕರಣಗಳಿವೆ.

ಕೋವಿಡ್‌ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿವೆ.

ರಾಜ್ಯದಲ್ಲಿ ಇಂದು 5,783 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 168 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸದ್ಯ ರಾಜ್ಯದಲ್ಲಿ 1,37,050 ಸಕ್ರಿಯ ಪ್ರಕರಣಗಳಿವೆ.

Read These Next

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...

ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಭಾವಚಿತ್ರ. ಕೇಂದ್ರ ಸರಕಾರಕ್ಕೆ ಕೇರಳ ಹೈಕೋರ್ಟ್ ನೋಟಿಸ್

ಮುಂಬೈ : ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಇಲ್ಲದ ಕೋವಿಡ್ ಲಸಿಕೆ ಪ್ರಮಾಣಪತ್ರವನ್ನು ಒದಗಿಸುವಂತೆ ಕೋರಿ ಸಲ್ಲಿಸಲಾದ ಮನವಿಯ ...