ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ೩ಮಂದಿ ಸಾವು; ೭ಜನರಿಗೆ ಗಾಯ

Source: sonews | By Staff Correspondent | Published on 13th November 2018, 5:31 PM | Coastal News | State News | Incidents | Don't Miss |

ಹೊನ್ನಾವರ:  ಚಾಲಕನನಿಯಂತ್ರಣ ತಪ್ಪಿದ ಕಾರೊಂದು ನಂತರ  ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊನ್ನಾವರ ತಾಲೂಕಿನ ಆರೊಳ್ಳಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ.  

ಈ ಅಪಘಾತದಲ್ಲಿ ಸಾವನ್ನಪ್ಪಿದ  ಫಾತೀಮಾ(೬೫), ರುಬಿಯಾ(೪೫) ಹಾಗೂ ಚಾಬು ಸಾಬ್ ಎಂಬುವವರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ನಿವಾಸಿಗಳೆಂದು ಗುರುತಿಸಲಾಗಿದೆ.  

ಗೋವಾದಲ್ಲಿ ಮದುವೆ ಕಾರ್ಯ ಮುಗಿಸಿ ಮರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದ್ದು ಕಾರಿನಲ್ಲಿದ್ದ ಇತರ ೭ ಮಂದಿ ಗಾಯಗೊಂಡಿದ್ದಾರೆ.  ಗಾಯಾಳುಗಳನ್ನು ಹೊನ್ನಾವರ ತಾಲೂಕು  ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Read These Next

ಭಟ್ಕಳ ತಲೂಕಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಸೇರಿದಂತೆ 45 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ

ಭಟ್ಕಳ: ಉತ್ತರಕನ್ನಡ ಜಿಲ್ಲಾದ್ಯಂತ ಕೊರೋನ ಸೋಂಕಿನ ಆತಂಕ ಹೆಚ್ಚಾಗುತ್ತಲೆ ಇದ್ದು ಸೋಮವಾರ 80ಕ್ಕೂ ಹೆಚ್ಚು ಮಂದಿಯಲ್ಲಿ ಕೋವಿಡ್-19 ...