ಭಾರತದಲ್ಲೇ ಮೊಬೈಲ್ ತಯಾರಿಕೆಗೆ ಕಂಪನಿಗಳ ದುಂಬಾಲು, 3 ಲಕ್ಷ ಉದ್ಯೋಗ ಸೃಷ್ಠಿ!

Source: ANI | Published on 2nd August 2020, 12:49 AM | National News | Don't Miss |

ನವದೆಹಲಿ: ಸ್ಯಾಮ್‌ಸಂಗ್, ಆ್ಯಪಲ್, ಫಾಕ್ಸ್‌ಕಾನ್ ಹೊನ್ ಹೈ, ರೈಸಿಂಗ್ ಸ್ಟಾರ್, ವಿಸ್ಟ್ರಾನ್ ಮತ್ತು ಪೆಗಾಟ್ರಾನ್ ಸೇರಿದಂತೆ 22 ಕಂಪನಿಗಳು ಮೇಕ್ ಇನ್ ಇಂಡಿಯಾ ಮೂಲಕ ಭಾರತದಲ್ಲೇ ಮೊಬೈಲ್ ಫೋನ್ ಗಳನ್ನು ಉತ್ಪಾದಿಸಲು ಮುಂದಾಗಿದ್ದು ಈ ಮೂಲಕ 3 ಲಕ್ಷ ಉದ್ಯೋಗ ಸೃಷ್ಠಿಯಾಗಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್ಐ) ಯೋಜನೆಯಡಿ ಭಾರತದಲ್ಲಿ 11.5 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನು ಉತ್ಪಾದಿಸಲಾಗುವುದು. ಇದಕ್ಕಾಗಿ 22 ಕಂಪನಿಗಳು ಅರ್ಜಿ ಸಲ್ಲಿಸಿದ್ದು ಅದರಲ್ಲಿ 7 ಲಕ್ಷ ಕೋಟಿ ಮೌಲ್ಯದ ಉತ್ಪನ್ನಗಳನ್ನು ರಫ್ತು ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. 
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರವಿಶಂಕರ್ ಪ್ರಸಾದ್ ಈ ಕಂಪನಿಗಳು ಮೂರು ಲಕ್ಷ ನೇರ ಮತ್ತು ಸುಮಾರು ಒಂಬತ್ತು ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಎಂದರು. ಆದರೆ ಇದೇ ವೇಳೆ ಈ ಯೋಜನೆ ಯಾವುದೇ ದೇಶದ ವಿರುದ್ಧವಾಗಿಲ್ಲ. ಇದು ಭಾರತ ಸಕಾರಾತ್ಮಕವಾಗಿದೆ ಎಂದು ಹೇಳುವ ಯೋಜನೆಯಾಗಿದೆ.  "ನಾನು ಯಾವುದೇ ದೇಶದ ಹೆಸರನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ನಮ್ಮ ಭದ್ರತೆ, ಗಡಿರೇಖೆಯ ದೇಶಗಳಿಗೆ ಸಂಬಂಧಿಸಿದಂತೆ ನಮಗೆ ನಮ್ಮದೇ ನಿಯಮಾವಳಿಗಳಿದೆ" 
"ನಾವು ಆಶಾವಾದಿಯಾಗಿದ್ದೇವೆ ಮತ್ತು ನಮ್ಮ ವ್ಯಾಲ್ಯೂ ಚೈನ್ ಮೂಲಕ  ಜಾಗತಿಕ ವ್ಯಾಲ್ಯೂ ಚೈನ್ ಜತೆಗೆ ಸಂಒಅರ್ಕ ಸಾಧಿಸಲು ಚಿಂತನ ನಡೆಸಿದ್ದೇವೆ. ಇದರಿಂದಾಗಿ ದೇಶದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನಾ ವಾತಾವರಣವನ್ನು ಬಲಪಡಿಸುತ್ತೇವೆ" ಎಂದು ಅವರು ಹೇಳಿದರು. ಜಾಗತಿಕ ಮತ್ತು ದೇಶೀಯ ಮೊಬೈಲ್ ಫೋನ್ ಉತ್ಪಾದನಾ ಕಂಪನಿಗಳು ಮತ್ತು ಎಲೆಕ್ಟ್ರಾನಿಕ್ ಘಟಕಗಳ ತಯಾರಕರಿಂದ ಪಡೆದ ಅರ್ಜಿಗಳ ವಿಷಯದಲ್ಲಿ ಪಿಎಲ್ಐ ಯೋಜನೆ ಭಾರಿ ಯಶಸ್ಸನ್ನು ಕಂಡಿದೆ ಎಂದು ಪ್ರಸಾದ್ ಹೇಳಿದರು. 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...