ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ; ೩೦ ಕ್ಕೂ ಅಧಿಕ ಮಂದಿ ಗಂಭೀರ

Source: sonews | By Staff Correspondent | Published on 1st January 2019, 10:50 PM | Coastal News | Incidents | Don't Miss |

ಕುಮಟಾ: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ೩೦ ಕ್ಕೂ ಅಧಿಕ ಮಂದಿ ಗಂಭೀರ ವಾಗಿ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ೬೬ ರ ಮಣಕಿ ಮೈದಾನದ ಬಳಿ ಮಂಗಳವಾರ  ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ದಿಂದ ಗೋಕರ್ಣಕ್ಕೆ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಹುಬ್ಬಳ್ಳಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಬಸ್ ನಲ್ಲಿದ್ದ ಸುಮಾರು ೩೦ ಕ್ಕೂ ಹೆಚ್ಚು ಮಂದಿ ಪ್ರಯಾಣಿಕ ರಿಗೆ ಗಾಯವಾಗಿದ್ದು, ಗಾಯ ಗೊಂಡವರನ್ನು ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ವೇಗಕ್ಕೆ ಲಾರಿ ಚಾಲಕನ ಒಂದು ಕಾಲು ಸಂಪೂರ್ಣವಾಗಿ ನುಜ್ಜಾಗಿದೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...