ಅಕ್ರಮ ಅಕ್ಕಿ ಸಾಗಾಟ:ವಾಹನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು

Source: so news | By MV Bhatkal | Published on 29th April 2019, 12:10 AM | Coastal News | Don't Miss |

ಭಟ್ಕಳ:ಪುರವರ್ಗ ಗ್ರಾಮದ ಗಣೇಶ ನಗರ ವ್ಯಾಪ್ತಿಯಲ್ಲಿ ಭಾನುವಾರದಂದು ವ್ಯಕ್ತಿಯೋರ್ವ ಮನೆಯಿಂದ ಬೊಲೇರೋ ವಾಹನದ ಮೇಲೆ ಸಂಗ್ರಹಿಸಿಟ್ಟ ಅಕ್ಕಿ ಅಕ್ರಮವಾಗಿ ತುಂಬುತ್ತಿದ್ದ ವೇಳೆ ಸಾರ್ವಜನಿಕರ ದೂರಿನ್ವಯ ಆಹಾರ ನಿರೀಕ್ಷಕರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿದ್ದು ಚಾಲಕ ಪರಾರಿಯಾಗಿದ್ದು ವಾಹನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಹ್ಮದ್ ಯುಸೂಬ್ ಹಮ್ಮಿದ್ ಎಂಬುವವರ ಮನೆಯ ಶೆಡನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಕ್ಕಿಯನ್ನು ಬೋಲೆಯೋ ಪಿಕಪ್ ವಾಹನ ಸಂಖ್ಯೆ ಕೆ.ಎ.16 - ಸಿ.3324 ನಲ್ಲಿ ತುಂಬುತ್ತಿದ್ದ ವೇಳೆ ಅಲ್ಲಿನ ಸಾರ್ವಜನಿಕರು ತಹಸೀಲ್ದಾರ ಕಛೇರಿಗೆ ದೂರವಾಣಿ ಕರೆ ಮಾಡಿ ದೂರು ನೀಡಿದ್ದರು. 
ತಹಸೀಲ್ದಾರ ಎನ್.ಬಿ.ಪಾಟೀಲ್ ಅವರ ಆದೇಶದ ಮೇರೆಗೆ ಕಾರ್ಯಪ್ರವೃತ್ತರಾದ ಆಹಾರ ನಿರೀಕ್ಷಕರು ಹಾಗೂ ಕಂದಾಯ ಅಧಿಕಾರಿಗಳು ದಿಡೀರ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 50 ಕೆ.ಜಿ.ಯ 60 ಚೀಲದ ಒಟ್ಟು 31 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದು ವಾಹನದಲ್ಲಿ ತುಂಬಿ ಬಂದರ್ ರಸ್ತೆಯಲ್ಲಿ ಕೃಷಿ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ದಾಸ್ತಾನು ಮಳಿಗೆಯಲ್ಲಿ ಶೇಖರಿಸಿಡಲಾಗಿದೆ. 
ಅಕ್ಕಿ ಸಾಗಾಟಕ್ಕೆ ಬಳಸಲಾದ ಬೊಲೇರೊ ವಾಹನವನ್ನು ವಶಕ್ಕೆ ಪಡೆದ ಅಧಿಕಾರಿಗಳು ನಗರ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದು, ವಾಹನದ ಚಾಲಕ ಪರಾರಿಯಾಗಿದ್ದಾನೆ. 
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆ ನಿರೀಕ್ಷಕ ಪ್ರವೀಣ, ಕಂದಾಯ ನಿರೀಕ್ಷಕ ಗಣಪತಿ ಮೇತ್ರಿ, ಮುಠ್ಠಳ್ಳಿ ಗ್ರಾಮ ಲೆಕ್ಕಾದಿಕಾರಿ ಸಲ್ಮಾನ ಖಾನ್ ಹಾಗೂ ಇತರ ಸಿಬ್ಬಂದಿಗಳು ಇದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...