ಸಂಡೂರಿನಲ್ಲಿ 3 ಲಕ್ಷ ರೂ.ಮೌಲ್ಯದ 32 ಕೆಜಿ ಗಾಂಜಾ ವಶ. ಆರೋಪಿ ನಾಪತ್ತೆ, ಪತ್ತೆಗೆ ಕಾರ್ಯಾಚರಣೆ.

Source: SO News | By Laxmi Tanaya | Published on 13th October 2020, 10:07 PM | State News | Don't Miss |

ಬಳ್ಳಾರಿ : ಜಿಲ್ಲೆಯ ಸಂಡೂರು ತಾಲೂಕಿನ ಸುಶೀಲಾನಗರದ ಹೊರವಲಯದ ಹೊಲವೊಂದರಲ್ಲಿ ಬೆಳೆಯಲಾಗಿದ್ದ ಗಾಂಜಾ ಬೆಳೆಯ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡವು 3ಲಕ್ಷ ರೂ.ಮೌಲ್ಯದ 32ಕೆಜಿ (142 ಗಾಂಜಾ ಗಿಡಗಳು) ಗಾಂಜಾ ವಶಪಡಿಸಿಕೊಂಡಿದೆ.

ಹೊಲದ ಮಾಲೀಕ ನಾಪತ್ತೆಯಾಗಿದ್ದು, ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ.
ಅಬಕಾರಿ ಜಿಲ್ಲಾಧಿಕಾರಿ ಸಯೀದಾ ಅಫ್ರೀನ್, ಡಿವೈಎಸ್ಪಿ ಬಸಪ್ಪ ಪೂಜಾರ್ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಗಳಾದ ಶಂಕರ್ ದೊಡ್ಡಮನಿ, ವಿಜಯಕುಮಾರ್ ಸೆಲವಡೆ, ಜ್ಯೋತಿಬಾಯಿ, ತುಕಾರಾಂ, ಆಂಜನೇಯ ಸೇರಿದಂತೆ ಅಬಕಾರಿ ಇಲಾಖೆಯ ಸಿಬ್ಬಂದಿ ಮಂಗಳವಾರ ದಿಢೀರ್ ದಾಳಿ ನಡೆಸಿ 8ಅಡಿ ಎತ್ತರಕ್ಕೆ ಬೆಳೆದು ನಿಂತಿದ್ದ 142 ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂಡೂರು ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...