ಎತ್ತಿನ ಹೊಳೆ ಯೋಜನೆ 2ನೇ ಹಂತದ 33 ಕಿ.ಮೀ ಕಾಮಗಾರಿ ಶೀಘ್ರ ಪೂರ್ಣ: ರಮೇಶ್ ಜಾರಕಿಹೊಳಿ.

Source: SO News | By Laxmi Tanaya | Published on 23rd January 2021, 10:32 PM | State News | Don't Miss |

ಹಾಸನ : ಎತ್ತಿನಹೊಳೆ ಯೋಜನೆಯ ಹಂತ 1 ಮತ್ತು 2 ಕಾಮಗಾರಿಗಳು 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಇದೇ ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ  ರಮೆಶ್ ಜಾರಕಿಹೊಳೆ ತಿಳಿಸಿದ್ದಾರೆ.

   ಜಿಲ್ಲೆಯ ಬೇಲೂರು ತಾಲ್ಲೂಕಿನ ಬೆಟ್ಟದ ಆಲೂರು ಗ್ರಾಮದ ಬಳಿ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಪರಿವೀಕ್ಷಿಸಿದ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿ ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಅವರು ತಿಳಿಸಿದರು.

    ಪ್ರಾಯೋಗಿಕ ನೀರನ್ನು ವೇದಾವತಿ ಕಣಿವೆಯ ಮೂಲಕ ಹರಿಸಲು ಯೋಜನೆಯನ್ನು ರೂಪಿಸಲಾಗಿದೆ. ತುಮಕೂರಿನ ಭೈರಗೊಂಡ್ಲು ಜಲಾಶಯದ ಕಾಮಗಾರಿ ನಡೆಯದೇ ಇರುವುದರಿಂದ ಪ್ರಾಯೋಗಿಕವಾಗಿ ಈ ರೀತಿ ನೀರನ್ನು ಹರಿಸಿ, ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತದೆ ಎಂದರು.

   ಎತ್ತಿನಹೊಳೆ ಯೋಜನೆಗಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ಹೊಸ ಭೂಸ್ವಾಧೀನ ಕಾಯ್ದೆ 2013 ರ ಪ್ರಕಾರ ಪ್ರಕ್ರಿಯೆಯನ್ನು ಕೈಗೊಂಡಿದ್ದು  ರೈತರಿಗೆ ಹಣವನ್ನು ಪಾವತಿಸಲು ಕ್ರಮ ವಹಿಸಲಾಗುವುದು  ಹಾಗೂ ಹಂತ ಹಂತವಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಮಗಾರಿಗಳನ್ನು ನಿರ್ವಹಿಸಲಾಗುತ್ತದೆ. ಯೋಜನೆಗೆ ಆರಂಭಿಕ ಮೊತ್ತ 12,912.36 ಕೋಟಿ ರೂ. ನಿಗದಿಗೊಳಿಸಿದ್ದು, ಎರಡೂ ಹಂತಗಳಲ್ಲಿ ಈವರೆಗೆ  ಒಟ್ಟು 7013.3 ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳಿದರು.

 ಹಾಗೂ  ಯಾವುದೇ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಆದಷ್ಟು ಶೀಘ್ರವಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು  ತಿಳಿಸಿದರು.

 ಸಣ್ಣ ನೀರಾವರಿ ಸಚಿವ ಸಿ.ಪಿ. ಯೋಗೇಶ್ವರ್, ಶಾಸಕರಾದ ಶಿವಲಿಂಗೆಗೌಡ, ಲಿಂಗೇಶ್ ಹಾಗೂ ಎತ್ತಿನ ಹೊಳೆ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರಾದ ಲಕ್ಷಣರಾವ್, ಮುಖ್ಯ ಇಂಜಿನಿಯರರಾದ ಮಾಧವ,ಸೂಪರ್ಡೆಂಟ್  ಇಂಜಿನಿಯರ್ ಶಿವಾರಂ, ಕಾರ್ಯನಿರ್ವಾಹಕ ಇಂಜಿನಿಯರ್ ಶರ್ಮಾ, ಸಹಾಯಕ ಕಾರ್ಯನಿರ್ವಾಹಕ  ಇಂಜಿನಿಯರ್ ಜೊತೆಯಲ್ಲಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...