ಭಟ್ಕಳದಲ್ಲಿ ನಡೆದ ಸಿಇಟಿಗೆ 382 ವಿದ್ಯಾರ್ಥಿಗಳು ಹಾಜರು

Source: S O News service | By I.G. Bhatkali | Published on 29th August 2021, 6:00 PM | Coastal News | Don't Miss |

ಭಟ್ಕಳ: ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ಶನಿವಾರ ಭಟ್ಕಳ ಅಂಜುಮನ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ತಾಲೂಕಿನ ವಿವಿದೆಡೆಯಿಂದ ಒಟ್ಟೂ 382 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಅಂಜುಮನ್ ಕಾಲೇಜಿನ ಒಟ್ಟೂ 16 ಕೋಣೆಗಳಲ್ಲಿ ಪರೀಕ್ಷೆಗೆ ವ್ಯವಸ್ಥೆಯನ್ನು ಮಾಡಲಾಗಿತ್ತು. ಕೋವಿಡ್ ಶಂಕಿತರಿಗಾಗಿ 2 ಪ್ರತ್ಯೇಕ ಕೋಣೆಗಳನ್ನು ಮೀಸಲಾಗಿರಿಸಲಾಗಿತ್ತು. 2 ಸಿಟ್ಟಿಂಗ್ ಸ್ಕ್ವಾಡ್ ಮತ್ತು 2ಫ್ಲಾಯಿಂಗ್ ಸ್ಕ್ವಾಡ್‍ಗಳು ಪರೀಕ್ಷೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಮೇಲುಸ್ತುವಾರಿ ವಹಿಸಿದ್ದವು. ಓರ್ವ ಮುಖ್ಯ ಪರೀಕ್ಷಾಧಿಕಾರಿ, ಇನ್ನೋರ್ವ ಸಹಾಯಕ ಪರೀಕ್ಷಾಧಿಕಾರಿ, ಓರ್ವ ಕಸ್ಟೋಡಿಯನ್‍ಗಳೊಂದಿಗೆ ಓರ್ವ ವೀಕ್ಷಕರನ್ನು ಪರೀಕ್ಷಾ ಕಾರ್ಯಕ್ಕಾಗಿ ನಿಯೋಜಿಸಲಾಗಿತ್ತು. ಪರೀಕ್ಷೆಗೆ ಬಂದ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಜ್ವರ ತಪಾಸಣೆ ಹಾಗೂ ಸೆನಿಟೈಸೇಶನ್‍ಗೆ ಒಳಪಡಿಸಿದರು. ಪರೀಕ್ಷಾ ಕೇಂದ್ರದ ಸುತ್ತ ಬಿಗಿಯಾದ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿತ್ತು, ರವಿವಾರವೂ ಪ್ರವೇಶ ಪರೀಕ್ಷೆ ನಡೆಯಲಿದೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...