ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್'ರ ಗನ್ ಮ್ಯಾನ್ ಸೇರಿ 4 ನೌಕರರಲ್ಲಿ ಕೊರೋನಾ ವೈರಸ್ ಪತ್ತೆ!

Source: PTI | Published on 7th July 2020, 11:50 PM | State News | Don't Miss |

 


ಬೆಂಗಳೂರು: ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರ ಗನ್'ಮ್ಯಾನ್ ಸೇರಿ ನಾಲ್ವರು ನೌಕರರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ. 
ಈ ಕುರಿತು ಸ್ವತಃ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ಗುಂಡೂರಾವ್ ಅವರು ಮಾಹಿತಿ ನೀಡಿದ್ದಾರೆ. 
ನಮ್ಮ ಆಪ್ತಸಹಾಯಕ, ಗನ್ ಮ್ಯಾನ್ ಸೇರಿದಂತೆ ಇಬ್ಬರು ಸಿಬ್ಬಂದಿಗಳಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. ನಾವೂ ಕೂಡ ಪರೀಕ್ಷೆಗೊಳಗಾಗಿದ್ದು, ಅದೃಷ್ಟವಶಾತ್ ನಮಗಾರಿಗೂ ವೈರಸ್ ದೃಢಪಟ್ಟಿಲ್ಲ. ಆದರೆ, ನಾವೆಲ್ಲರೂ 10-14 ದಿನಗಳ ಕಾಲ ಐಸೋಲೇಷನ್ ಮತ್ತು ಕ್ವಾರಂಟೈನ್ ನಲ್ಲಿದ್ದೇವೆ. ಸೋಂಕಿತರೊಂದಿಗೆ ನಾವು ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ಕ್ವಾರಂಟೈನ್ ಗೊಳಗಾಗುತ್ತಿದ್ದೇವೆ. ಶೀಘ್ರದಲ್ಲೇ ಇದರಿಂದ ಹೊರಬರುವ ವಿಶ್ವಾಸವಿದೆ ಎಂದು ಟಬು ಟ್ವೀಟ್ ಮಾಡಿದ್ದಾರೆ

Read These Next

ಕೋಸ್ಟಲ್ ಎಕನಾಮಿಕ್ ಝೋನ್ ಮಾಡುವ ಕುರಿತು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ-ಅನಂತ್ ಕುಮಾರ್ ಹೆಗಡೆ

ಭಟ್ಕಳ: ಕರಾವಳಿಯ ತಾಲೂಕುಗಳ ಅಭಿವೃದ್ಧಿಯು ಬಂದರ ಅಭಿವೃದ್ಧಿಯಿಂದ ಮಾತ್ರ ಸಾಧ್ಯವಾಗುವುದು. ಈಗಾಗಲೇ ಕೋಸ್ಟಲ್ ಎಕನಾಮಿಕ್ ಝೋನ್ ...

ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ; ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶಿರಸಿಯ ಸನ್ನಿಧಿ ಹೆಗಡೆಯ ಮನದಿಂಗಿತ

ಭಟ್ಕಳ: ಕೊರೋನಾ ಲಾಕ್ಡೌನ್ ಸದೂಪಯೋಗಗೊಂಡಿದ್ದು ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ ಎಂದು 625/625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ...