ಕೊರೋನಾದಿಂದ ಮೃತಪಟ್ಟವರಿಗೆ 4 ಲಕ್ಷ ಪರಿಹಾರ ನೀಡಲು ಸಾಧ್ಯವಿಲ್ಲ : ಕೇಂದ್ರ ಸರ್ಕಾರ

Source: ANI | By MV Bhatkal | Published on 20th June 2021, 7:35 PM | National News |

ಬೆಂಗಳೂರು:ಕೋವಿಡ್ ನಿಂದ ಮೃತಪಟ್ಟವರೆಲ್ಲರಿಗೂ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೋವಿಡ್ ನಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಕುರಿತು ಅಭಿಪ್ರಾಯ ತಿಳಿಸುವಂತೆ ಸೂಚಿಸಿತ್ತು. ಅದನ್ನು ಆಧರಿಸಿ ಕೇಂದ್ರ ಸರ್ಕಾರ ಪ್ರಮಾಣಪತ್ರ ಸಲ್ಲಿಸಿದ್ದು ಕೋವಿಡ್ ನಿಂದ ಮೃತಪಟ್ಟವರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ತಲಾ ನಾಲ್ಕು ಲಕ್ಷ ರೂಪಾಯಿಗಳ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದಿದೆ.
ಭೂಕಂಪ, ನೆರೆಯಂತಹ ಪ್ರಕೃತಿ ವಿಕೋಪಗಳಿಗೆ ಮಾತ್ರ ಪರಿಹಾರ ನೀಡುವುದನ್ನು ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ ಪ್ರತಿಪಾದಿಸುತ್ತದೆ. ಕೋವಿಡ್ ನಿಂದ ದೇಶದಲ್ಲಿ ಸರಿ ಸುಮಾರು 4 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ಒಂದು ವೇಳೆ ಎಲ್ಲರಿಗೂ ತಲಾ ನಾಲ್ಕು ಲಕ್ಷದಂತೆ ಪರಿಹಾರ ನೀಡುತ್ತಾ ಹೋದರೆ ಎಸ್ ಡಿ ಆರ್ ಎಫ್ ನ ಹಣ ಪೂರ್ತಿ ಕೋವಿಡ್ ನಿಂದ ಸತ್ತವರಿಗೆ ಪರಿಹಾರ ಕೊಡಲು ಖರ್ಚಾಗುತ್ತದೆ. ಪರಿಹಾರದ ಖರ್ಚು ಮತ್ತಷ್ಟು ಹೆಚ್ಚಾಗಬಹುದು. 
ರಾಜ್ಯಗಳು ಎಲ್ಲಾ ಹಣವನ್ನು ಪರಿಹಾರಕ್ಕೆ ಖರ್ಚು ಮಾಡಿಕೊಂಡರೆ ಕೊರೊನಾ ಸೋಂಕಿನ ಚಿಕಿತ್ಸೆ, ವೈದ್ಯಕೀಯ ಸೌಲಭ್ಯಗಳಿಗೆ ಹಣದ ಕೊರತೆ ಎದುರಾಗುತ್ತದೆ. ಮುಂದೆ ಸೈಕ್ಲೋನ್, ನೆರೆಯಂತರ ಅನಾಹುತಗಳು ನಡೆದರೆ ಪರಿಹಾರ ಕಾರ್ಯಗಳಿಗೆ ಹಣ ಇಲ್ಲವಾಗುತ್ತದೆ ಎಂದು ಕೇಂದ್ರ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿದೆ. 
ಮೃತಪಟ್ಟವರಿಗೆ ವಿಮಾ ಪರಿಹಾರ ಪಾವತಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಜಿಲ್ಲಾಧಿಕಾರಿಗಳು ಮತ್ತು ವಿಮಾ ಕಂಪೆನಿಗಳು ಜಂಟಿಯಾಗಿ ಹಣ ಬಿಡುಗಡೆಯ ಕುರಿತು ಕೆಲಸ ಮಾಡುತ್ತಿದ್ದಾರೆ. ವಿಮಾ ಕಂಪೆನಿಗಳಿಗೆ 442.4 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಕೋವಿಡ್ ನಿರ್ವಹಣೆಗಾಗಿ ರಾಜ್ಯಗಳಿಗೆ 2019-20ರಲ್ಲಿ ಹೆಚ್ಚುವರಿಯಾಗಿ 1,113.21 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ತುರ್ತು ಪ್ರತಿಕ್ರಿಯೆಗಾಗಿ 8,257.89 ಕೊಟಿ ರೂಪಾಯಿಗಳನ್ನು ಬಿಡುಗಡೆ ಮಾಡಿರುವುದಾಗಿ ಕೇಂದ್ರ ಸರ್ಕಾರ ನ್ಯಾಯಾಲಕ್ಕೆ ತಿಳಿಸಿದೆ.

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...