ಪ್ರವಾಹ ರಾಜ್ಯದ 11 ಜಿಲ್ಲೆಗಳಿಗೆ ತಲಾ ₹5 ಕೋಟಿ ಹೆಚ್ಚುವರಿ ಅನುದಾನ: ಆರ್.ಅಶೋಕ

Source: Prajavani | Published on 8th August 2020, 12:10 AM | Coastal News | Don't Miss |

 


ಉಡುಪಿ: ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗೆ ರಾಜ್ಯದ 11 ಜಿಲ್ಲೆಗಳಿಗೆ ತಲಾ ₹ 5 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಿದ್ಧವಿದ್ದು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಹಾವೇರಿ, ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಕಳೆದ ವರ್ಷ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2, 3 ಹಾಗೂ 4ನೇ ಕಂತಿನ ಹಣವನ್ನು ವಾರದೊಳಗೆ ಬಿಡುಗಡೆ ಮಾಡಲಾಗುವುದು. ಗೃಹ ನಿರ್ಮಾಣ ಮಂಡಳಿಗೆ ₹ 300 ಕೋಟಿ ಬಿಡುಗಡೆ ಮಾಡುತ್ತಿದ್ದು, ಹಣ ಬಿಡುಗಡೆ ಸಂಬಂಧ ಎಲ್ಲ ಫಲಾನುಭವಿಗಳಿಗೂ ಸರ್ಕಾರ ಪತ್ರ ಬರೆದು ಮಾಹಿತಿ ನೀಡಲಿದೆ ಎಂದು ತಿಳಿಸಿದರು

Read These Next

2020 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ವಿದ್ಯಾರ್ಥಿಗಳು “Online” ಮೂಲಕ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು (ಮೂಲ ದಾಖಲೆಗಳ ಜೊತೆಯಲ್ಲಿ) ಪರಿಶೀಲನೆಗಾಗಿ ತಾವು ಅಧ್ಯಯನ ...