ರಾಜ್ಯದಲ್ಲಿ ಮೊದಲ 'ಝೀಕಾ' ಸೋಂಕು ಪತ್ತೆ ರಾಯಚೂರಿನಲ್ಲಿ ವರದಿಯಾದ ಪ್ರಕರಣ: ಸುಧಾಕರ್

Source: Vb | By I.G. Bhatkali | Published on 13th December 2022, 11:57 AM | State News |

ಬೆಂಗಳೂರು: ರಾಯಚೂರು ಜಿಲ್ಲೆಯಲ್ಲಿ ಮಾನ್ವಿ ತಾಲೂಕಿನ ಐದು ವರ್ಷದ ಬಾಲಕಿಗೆ ಝೀಕಾ ವೈರಸ್ ತಗಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸೋಮವಾರ ನಗರದ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 15 ದಿನಗಳಿಂದ ಜ್ವರ, ವಾಂತಿ, ಭೇದಿಯಿಂದ ಬಳಲುತ್ತಿದ್ದ ಬಾಲಕಿಗೆ ಮೊದಲು ಸಿಂಧನೂರು ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಡೆಂಗಿ ಜ್ವರದ ವಿಜಯನಗರದ ವಿಮ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಮುಂದುವರಿಸಲಾಯಿತು ಎಂದರು.

ವಿಮ್ಸ್‌ ಆಸ್ಪತ್ರೆಯ ವೈದ್ಯರು ಬಾಲಕಿಯ ರಕ್ತಹಾಗೂ ಮೂತ್ರದ ಮಾದರಿಯನ್ನು ಸಂಗ್ರಹಿಸಿ ಪುಣೆಯ ವೈರಾಲಜಿ ಲ್ಯಾಬ್‌ಗೆ ಕಳುಹಿಸಿದರು. ಅಲ್ಲಿಂದ ಪಾಸಿಟಿವ್ ರಿಪೋರ್ಟ್ ಬಂದಿದೆ. ಝೀಕಾ ವೈರಸ್ ಸೋಂಕಿತ ಬಾಲಕಿ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಅವರ ಕುಟುಂಬ ಸದಸ್ಯರ ರಕ್ತ ಹಾಗೂ ಮೂತ್ರದ ಮಾದರಿಯನ್ನು ಸಂಗ್ರಹಿಸಲಾಗಿದೆ ಎಂದು ಅವರು ತಿಳಿಸಿದರು.

ಅಲ್ಲದೆ, ರಾಯಚೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಝೀಕಾ ವೈರಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಝೀಕಾ ವೈರಸ್‌ಗೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸುಧಾಕರ್ ಹೇಳಿದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...