ವಿಪತ್ತು ನಿರ್ವಹಣೆಗೆ 50ಲಕ್ಷ ರೂ. ಅನುದಾನ; ದ್ರೋಣ್, ಇನ್‍ಫ್ಲೇಟ್‍ಬೋಟ್ ಖರೀದಿ: ಡಿಸಿ

Source: S.O. News Service | By MV Bhatkal | Published on 17th July 2019, 6:53 PM | Coastal News | Don't Miss |

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿಪತ್ತು ನಿರ್ವಹಣೆಗಾಗಿ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು ಈ ಅನುದಾನದಲ್ಲಿ ಒಂದು ದ್ರೋಣ್ ಕ್ಯಾಮೆರಾ, ವಿಕಿರಣ ಮಾಪನ ಯಂತ್ರ, ಮೋಟಾರ್ ಚಾಲಿತ ಇನ್‍ಫ್ಲೇಟ್ ಬೋಟ್ ಸೇರಿದಂತೆ ಜಿಲ್ಲೆಗೆ ವಿಪತ್ತು ನಿರ್ವಹಣೆಗೆ ಅಗತ್ಯವಿರುವ ರಕ್ಷಣಾ ಸಲಕರಣೆಗಳನ್ನು ಖರೀದಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ಕೆ. ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆಯವರ ವಿಶೇಷ ಮುತುವರ್ಜಿಯಿಂದ ಸರ್ಕಾರ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದ್ದು, ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ರಕ್ಷಣಾ ಸಲಕರಣೆಗಳನ್ನು ಖರೀದಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ಅವರು ಬುಧವಾರ ಕಾರವಾರದಲ್ಲಿ ತಿಳಿಸಿದರು.
ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ದ್ರೋಣ್ ಕ್ಯಾಮೆರಾದ ಅಗತ್ಯದ ಬಗ್ಗೆ ಪೊಲೀಸ್ ಇಲಾಖೆಯಿಂದ ಬೇಡಿಕೆ ಇತ್ತು. ಅದಕ್ಕಾಗಿ 13 ಲಕ್ಷ ರೂ. ಮೊತ್ತದ ಗುಣಮಟ್ಟದ ಚಿತ್ರೀಕರಣ ಮಾಡುವ ಸುಸಜ್ಜಿತ ದ್ರೋಣ್ ಕ್ಯಾಮೆರಾ ಖರೀದಿಸಲಾಗುತ್ತಿದೆ. ಅದನ್ನು ಪೊಲೀಸ್ ಇಲಾಖೆ ನಿರ್ವಹಣೆಗೆ ನೀಡಲಾಗುವುದು ಎಂದು ಅವರು ವಿವರಿಸಿದರು.
ನದಿ ಅಥವಾ ನೀರಿನ ಅವಘಡ ಸಂದರ್ಭದಲ್ಲಿ ಇನ್‍ಫ್ಲೇಟ್ ಬೋಟ್ (ಗಾಳಿ ತುಂಬಿದ ದೋಣಿ) ಅಗತ್ಯವಿತ್ತು. ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ದೋಣಿಯನ್ನು ಖರೀದಿಸಲಾಗುತ್ತಿದೆ. ಅಲ್ಲದೆ ಕೈಗಾ ಅಣುವಿದ್ಯುತ್ ಸ್ಥಾವರದ ಸುತ್ತಮುತ್ತಲ ಪ್ರದೇಶದಲ್ಲಿ ವಿಕಿರಣ ಸಂಬಂಧಿಸಿದಂತೆ ಕೆಲವು ವದಂತಿಗಳು ಆಗಾಗ ಕೇಳಿಬರುತ್ತವೆ. ಕೈಗಾ ನಿರ್ವಹಣೆಯಲ್ಲಿ ವಿಕಿರಣ ಸೋರಿಕೆಯಂತಹ ಯಾವುದೇ ಅವಘಡಗಳು ಸಾಧ್ಯವಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ವಿಕಿರಣ ಪ್ರಮಾಣವನ್ನು ಪರೀಕ್ಷೆ ಮಾಡಲು ಅಥವಾ ವದಂತಿ ಸಂದರ್ಭದಲ್ಲಿ ಪರೀಕ್ಷೆ ಕೈಗೊಳ್ಳಲು ವಿಕಿರಣ ಮಾಪನ ಯಂತ್ರವನ್ನು ಖರೀದಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಉಳಿದಂತೆ ಲೈಫ್‍ಜಾಕೆಟ್‍ಗಳು, ತುರ್ತುಚಿಕಿತ್ಸಾ ಕಿಟ್‍ಗಳು ಸೇರಿದಂತೆ ವಿವಿಧ ರಕ್ಷಣಾ ಸಲಕರಣಗಳನ್ನು ಖರೀದಿಸಲಾಗುತ್ತಿದ್ದು ಟೆಂಡರ್ ಪ್ರಕ್ರಿಯೆ ಮುಗಿದಿದೆ. ಆಗಸ್ಟ್ 15ರ ಹೊತ್ತಿಗೆ ಖರೀದಿ ಪ್ರಕ್ರಿಯೆ ಮುಗಿದು ವಿಪ್ಪತ್ತು ನಿರ್ವಹಣಾ ವಿಭಾಗದಲ್ಲಿ ಸೇರ್ಪಡೆಯಾಗಲಿವೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...