ಕೋವಿಡ್-19: ಭಾರತದಲ್ಲಿಂದು 58,419 ಹೊಸ ಕೇಸ್ ಪತ್ತೆ, 1,576 ಮಂದಿ ಸಾವು

Source: ANI | By MV Bhatkal | Published on 20th June 2021, 12:07 PM | National News |

ನವದೆಹಲಿ: ಭಾರತದಲ್ಲಿ ಕೊರೋನಾ ಅಬ್ಬರದ ಇಳಿಕೆಯ ಹಾದಿ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 58,419 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1576 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,98,81,965ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,86,713ಕ್ಕೆ ಏರಿಕೆಯಾಗಿದೆ. 
ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 7,29,243ಕ್ಕೆ ಕುಸಿದ್ದು, 75 ದಿನಗಳ ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ ಸಕ್ರಿಯ ಸೋಂಕಿತರ ಸಂಖ್ಯೆ ಇದಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 
ಈ ನಡುವೆ ಕಳೆದ 24 ಗಂಟೆಗಳಲ್ಲಿ 87,619 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,87,66,009ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 18,11,446 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 39,10,19,083 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 27,66,93,572 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...