ಕಾರವಾರ 5ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಯೋಗಾಸನ ಪ್ರದರ್ಶನದಲ್ಲಿ ಜನಪ್ರತಿನಿಧಿಗಳು-ಅಧಿಕಾರಿಗಳು ಭಾಗಿ

Source: so news | By MV Bhatkal | Published on 22nd June 2019, 12:46 PM | Coastal News | Don't Miss |

ಕಾರವಾರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆಯುಷ್, ಆರೋಗ್ಯ ಶಿಕ್ಷಣ ಇಲಾಖೆ,ಜಿಲ್ಲಾ ನೌಕರರ ಸಂಘ ಹಾಗೂ ಇತರೆ ಸ್ಥಳಿಯ ಸಂಘ ಸಂಸ್ಥೆಗಳ   ಸಹಯೋಗದಲ್ಲಿ ಶುಕ್ರವಾರ ನಗರದ ಇಂದಿರಾಕಾಂತ ಸಭಾ ಭವನದಲ್ಲಿ  5ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಜರುಗಿತು.
ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯುವ ಜನತೆ ಏನಾದರೂ ಸಾಧಿಸಬೇಕೆನ್ನುವ  ಉತ್ಸಾಹದಲ್ಲಿ ಆರೋಗ್ಯವನ್ನು ನಿರ್ಲಕ್ಷಿಸಬಾರದು. ಮಾನಸಿಕ ಮತ್ತು ದೈಹಿಕ ಆರೋಗ್ಯದ ನಡುವೆ ಸಮತೋಲನವಿರಬೇಕು. ಅದಕ್ಕೆ ಯೋಗ ಸಹಕಾರಿಯಾಗಿದೆ. ಯೋಗ ನಮ್ಮ ದೇಶದ ಪಾರಂಪರಿಕ ಕೋಡುಗೆ ಅದನ್ನು ಮುಂದುವರಿಸಿಕೊಂಡು ಹೋಗಬೇಕು. ಅದಕ್ಕಾಗಿ ಸರಕಾರ ಯೋಗ ದಿನಾಚರಣೆ ಆಚರಿಸುತ್ತದೆ ಎಂದು ಹೇಳಿದರು.   
ಕಾರವಾರ- ಅಂಕೋಲಾ  ಮತಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ  ಯೋಗಾಬ್ಯಾಸವನ್ನು ಮಾಡುವುದನ್ನು   ಕೇವಲ ಯೋಗದಿನಾಚರಣೆಗೆ ಸೀಮಿತಗೊಳಿಸದೇ ಪ್ರತಿದಿನದ ದಿನಚರಿಯಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲರೂ ಸಂಪತ್ತು ಗಳಿಕೆ ಹಿಂದೆ ಓಡುತ್ತಿದ್ದಾರೆ. ಆದರೆ ಆರೋಗ್ಯ ಸಂಪತ್ತು ಕಾಪಾಡಿಕೊಂಡು ಹೋಗುವುದು ಕೂಡಾ ಅಷ್ಟೇ ಮಹತ್ವದ್ದಾಗಿದೆ, ಯೋಗದಿಂದ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದ್ದು ಆರೋಗ್ಯ ಮತ್ತು ಆಯುಷ್ಯ ಚೆನ್ನಾಗಿಟ್ಟುಕೊಳ್ಳೊಣ ಎಂದರು.   
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ, ಡಿವೈಎಸ್ಪ ಶಂಕರ ಮಾರಿಹಾಳ ಶಸಸ್ತ್ರಮೀಸಲು ಪಡೆಯ ಸಿಪಿಐ ಸಚಿನ್ ಲಾರೆನ್ಸ್,  ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಕೇ ಮಂಜುನಾಥ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಲಿತಾ ಯು.ಹೆಚ್. ಆಯುಷ್ ಇಲಾಖೆ ವೈದ್ಯ ಡಾ. ಜಗದೀಶ ಯಾಜಿ,   ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಹಿಮಂತರಾಜು. ಜಿ.   ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
ಯೋಗ ಪ್ರಾತ್ಯಕ್ಷಿಕೆ: 
ತಡಾಸನ, ವೃಕ್ಷಾಸನ, ಪಾದ ಹಸ್ತಾಸನ, ಅರ್ಧ ಚಕ್ರಾಸನ, ತ್ರಿಕೋನಾಸನ, ದಂಡಾಸನ, ಭದ್ರಾಸನ, ಮಕರಾಸನ, ಭುಜಂಗಾಸನ, ಶಲಭಾಸನ, ಸೇತುಬಂದಿ ಆಸನ, ಉತ್ತಣ ಪಾದಾಸನ, ಅರ್ಧ ಹಾಲಾಸನ, ಪವನ ಮುಕ್ತಿ ಆಸನ, ಶವಾಸನ ಸೇರಿದಂತೆ ವಿವಿಧ ಆಸನಗಳನ್ನು ಯೋಗ ಪ್ರಾತ್ಯಕ್ಷಿಕೆಯಲ್ಲಿ ಪ್ರದರ್ಶಿಸಲಾಯಿತು.
ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ, ಶಾಲಾ, ಕಾಲೇಜು ವಿದ್ಯಾರ್ಥಿನಿಯರು ಸೇರಿದಂತೆ ಎಲ್ಲರೂ ಯೋಗ ಪ್ರಾತ್ಯಕ್ಷಿಕೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದು, . ಜಿಲ್ಲಾಸ್ಪತ್ರೆ ಯೋಗ ವೈದ್ಯ ಡಾ. ಎ.ಜೆ. ಪ್ರಕಾಶ ಹಾಗೂ ಶ್ರೀಮತಿ ರೇಣುಕಾ  ಅವರು ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಸಿಕೊಟ್ಟರು. 
ಮೈನವಿರೇಳಿಸಿದ ಮಕ್ಕಳ ಯೋಗ:
ಮಹಿಳೆಯರು ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಯೋಗಾಸನ ಪ್ರದರ್ಶನದಲ್ಲಿ ಪಾಲ್ಗೊಂಡಿದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...