ಜೂನ 21 ರಂದು 5ನೇ ಅಂತರಾಷ್ಟ್ರೀಯ  ಯೋಗ ದಿನಾಚರಣೆ

Source: so news | By MV Bhatkal | Published on 19th June 2019, 8:07 PM | Coastal News | Don't Miss |

ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್,  ಶಿಕ್ಷಣ, ಆರೋಗ್ಯ, ಆಯುಷ್ ಇಲಾಖೆ, ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಹಾಗೂ ಇತರೆ ಸ್ಥಳೀಯ ಸಂಘ ಸಂಸ್ಥೆಗಳ  ಸಹಯೋಗದಲ್ಲಿ ಜೂನ  21ರಂದು ಶುಕ್ರವಾರ  ಕಾರವಾರದ ಮುರಳಿದರ ಮಠ ರಸ್ತೆಯಲ್ಲಿರುವ ಇಂದಿರಾಕಾಂತ ಸಭಾ ಭವನದಲ್ಲಿ  5ನೇ ಅಂತರಾಷ್ಟ್ರೀಯ  ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. 
ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತರಾದ ಶ್ರೀಮತಿ ಮೀನಾಕ್ಷಿ ನೇಗಿ, ಸಂಸದ ಅನಂತಕುಮಾರ ಹೆಗಡೆ, ಶಾಸಕರಾದ ಶಿವರಾಮ ಹೆಬ್ಬಾರ, ವಿಶ್ವೇಶ್ವರ ಹೆಗಡೆ ಕಾಗೇರಿ, ದಿನಕರ ಶೆಟ್ಟಿ. ಸುನಿಲ ನಾಯ್ಕ, ಜಿಪಂ ಅಧ್ಯಕ್ಷೆ ಜಯಶ್ರೀ ಮೋಗೇರ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿರುವರು. 
ಜೂನ 20 ರಂದು ಯೋಗ ಜಾಥಾ : ಯೋಗದ ಮಹತ್ವ ಸಾರಲು ಜಿಲ್ಲಾ ಆಯುಷ್ ಇಲಾಖೆ ಜೂನ 20 ರಂದು ಬೆಳಗ್ಗೆ 11 ಗಂಟೆಗೆ ಯೋಗ ಜಾಥಾ ಹಾಗೂ 12 ಗಂಟೆಗೆ ಆಯುಷ್ ಇಲಾಖೆಯ ಯೋಗ ಹಾಲ್‍ನಲ್ಲಿ ಂಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  
ಯೋಗ ದಿನಾಚರಣೆಯ ಇತಿಹಾಸ ಅಂತರಾಷ್ಟ್ರೀಯ  ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನು 2014 ಡಿಸೆಂಬರನಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ  ಖಾಯಂ ಪ್ರತಿನಿಧಿ ಮಂಡಿಸಿದ್ದರು. ವಿಶ್ವ ಸಂಸ್ಥೆಗೆ  ಇದು ಐತಿಹಾಸಿಕ ಕ್ಷಣವಾಗಿದ್ದು ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದರು. ವಿಶ್ವಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು  ಅನುಮೋದನೆಯನ್ನು ನೀಡಿದ್ದವು 2015- ಜೂನ 21 ನೇ ದಿನಾಂಕದಂದು ಮೊದಲ ಅಂತರಾಷ್ಟ್ರೀಯ ಯೋಗದಿನವನ್ನು ವಿಶ್ವದಾದ್ಯಂತ ಆಚರಿಸಲಾಯಿತು.
ಜೂನ -21 ರ ವಿಶೇಷ : ಜೂನ 21 ವರ್ಷದ ದೀರ್ಘ ಹಗಲಿರುವ ಆದಿನ  ನಾವು ಹೆಚ್ಚು ಚಟುವಟಿಕೆಯಿಂದಿರುತ್ತೇವೆ. ಉತ್ತರ ಗೋಳಾರ್ಧದ ಅತಿ ಉದ್ದದ ಹಾಗೂ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ.
ಜಿಲ್ಲಾ ಆಯುಷ್ ಇಲಾಖೆ  ಕಳೆದ 4 ವರ್ಷಗಳಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿಕೊಂಡು ಬಂದಿದ್ದು,  ಈ ವರ್ಷ ಕೂಡಾ 5 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು  ಆಯುಷ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳು ಮತ್ತು ರಾಷ್ಟ್ರೀಯ ಯೋಗ ಪಟು, ಸರಕಾರಿ ಯೋಗ ವೈದ್ಯ ಡಾ.ಪ್ರಕಾಶ ಎ.ಜೆ ಇವರ ಮಾರ್ಗದರ್ಶನದಲ್ಲಿ  ಬೆಳಗ್ಗೆ 6.30ರಿಂದ 8ರವರೆಗೆ ಯೋಗ ಕಾರ್ಯಕ್ರಮ ನಡೆಸಿಕೊಡುವರು.   ಯೋಗ ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲಾ ಯೋಗಪಟುಗಳು  ಯೋಗ ಮಾಡಲು ಬೆಡ್ ಶೀಟ್/ಚಾದರ/ಯೋಗ ಮ್ಯಾಟ್ ತರಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಮನವಿ ಮಾಡಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...