ಚಿಂತಾಮಣಿ ಸಮೀಪ ಲಾರಿ-ಜೀಪು ಢಿಕ್ಕಿ: 6 ಮಂದಿ ಮೃತ್ಯು,11 ಮಂದಿ ಗಂಭೀರ

Source: VB News | By MV Bhatkal | Published on 12th September 2021, 7:10 PM | State News | Don't Miss |

ಚಿಂತಾಮಣಿ :ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಮರಿನಾಯಕನಹಳ್ಳಿ ಬಳಿ ಕಾರು-ಸಿಮೆಂಟ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಚಿಂತಾಮಣಿಯ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ ನೇತೃತ್ವದಲ್ಲಿ ಪೊಲೀಸರ ತಂಡ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದೆ. 

ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದ್ದು ಜೀಪಿನಲ್ಲಿದ್ದ ಸುಮಾರು ಜನರ ದುರ್ಮರಣ ಆಗಿರುವ ಘಟನೆ ನಡೆದಿದ್ದು, ಇನ್ನೂ ಹಲವಾರು ಗಾಯಾಳುಗಳನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆಗೆ ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ.ನಂಜೇಗೌಡರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯವನ್ನು ಮಾಡಿ ಮಾನವೀಯತೆ ಮೆರೆದಿದ್ದಾರೆ. ಶಾಸಕರು ರಸ್ತೆ ಮಾರ್ಗವಾಗಿ ಹೋಗುತ್ತಿದ್ದಾಗ ಅಪಘಾತ ಕಂಡು ರಕ್ಷಣಾ ಕಾರ್ಯ ನಡೆಸಲು ಮುಂದಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆಯ ತೀವ್ರತೆಗೆ ಜೀಪ್ ನಜ್ಜುಗುಜ್ಜಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...