ಹೊಸದಿಲ್ಲಿ: ಕೋವ್ಯಾಕ್ಸಿನ್‌ಗೆ ಸಮ್ಮತಿ ಕುರಿತು 6 ವಾರಗಳಲ್ಲಿ ನಿರ್ಧಾರ: ಡಬ್ಲ್ಯುಎಚ್‌ಒ

Source: VB | By S O News | Published on 10th July 2021, 11:43 AM | National News |

ಹೊಸದಿಲ್ಲಿ: ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)ಯು ಭಾರತ ಬಯೋಟೆಕ್ನ ಕೋವ್ಯಾಕ್ಸಿನ್ ಅನ್ನು ತುರ್ತು ಬಳಕೆಗಾಗಿ ಅಂಗೀಕರಿಸಲಾಗಿರುವ ಲಸಿಕೆಗಳ ತನ್ನ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ನಾಲ್ಕರಿಂದ ಆರು ವಾರಗಳಲ್ಲಿ ನಿರ್ಧಾರವೊಂದನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಡಬ್ಲ್ಯುಎಚ್ ಒದ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ಸೆಂಟರ್ ಫಾರ್ ಸೈನ್ಸ್ ಆ್ಯಂಡ್ ಎನ್ವಿರಾನೈಂಟ್ ಆಯೋಜಿಸಿದ್ದ ವೆಬಿನಾರ್‌ನಲ್ಲಿ ಮಾತನಾಡುತ್ತ ತಿಳಿಸಿದರು.

ಕೋವ್ಯಾಕ್ಸ್‌ನಂತಹ ಜಾಗತಿಕ ಖರೀದಿ ಸಂಸ್ಥೆಗಳಿಗೆ ಲಸಿಕೆಗಳನ್ನು ಪೂರೈಸಲು ಲಸಿಕೆ ತಯಾರಿಕೆ ಕಂಪೆನಿಯು ಡಬ್ಲ್ಯುಎಚ್‌ಒ ಪೂರ್ವಾರ್ಹತೆ ಅಥವಾ ಇಯುಎಲ್ ನ್ನು ಹೊಂದಿರುವುದು ಅಗತ್ಯವಾಗಿದೆ. ಈವರೆಗೆ ಎಂಟು ಲಸಿಕೆಗಳು ಡಬ್ಲ್ಯುಎಚ್‌ಒನಿಂದ ಇಯುಎಲ್ ಪಡೆದುಕೊಂಡಿವೆ.

ಲಸಿಕೆಯ ಸುರಕ್ಷತೆ, ಪರಿಣಾಮಕಾರಿತ್ವ ಮತ್ತು ತಯಾರಿಕೆ ಸ್ಥಿತಿಗಳ ಸಂಪೂರ್ಣ ವಿವರಗಳನ್ನು ಡಬ್ಲ್ಯುಎಚ್‌ಒಗೆ ಸಲ್ಲಿಸುವುದು ಕಡ್ಡಾಯವಾಗಿದೆ. ಭಾರತ ಬಯೋಟೆಕ್ ಈ ಪ್ರಕ್ರಿಯೆಯಲ್ಲಿದೆ ಎನ್ನುವುದು ತನಗೆ ಗೊತ್ತಿದೆ ಮತ್ತು ಮುಂದಿನ ನಾಲ್ಕರಿಂದ ಆರು ವಾರಗಳಲ್ಲಿ ಕೋವ್ಯಾಕ್ಸಿನ್ ಬಗ್ಗೆ ನಿರ್ಧಾರವೊಂದನ್ನು ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಾನು ಭಾವಿಸಿದ್ದೇನೆ ಎಂದು ಸ್ವಾಮಿನಾಥನ್ ತಿಳಿಸಿದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...