ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

Source: SO News | By Laxmi Tanaya | Published on 15th December 2023, 10:14 PM | Coastal News | Sports News |

ಕಾರವಾರ: ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದೆ. ಚಾಂಪಿಯನ್ ಶಿಪ್ ‌ನಲ್ಲಿ  ಒಂದು ಬೆಳ್ಳಿ ಮತ್ತು ಎರಡು ಕಂಚು ಪದಕ ಗಳಿಸುವ ಮೂಲಕ ರಾಷ್ಟ್ರದ ಹೆಮ್ಮೆಯ ತಂಡವಾಗಿ ಕರ್ನಾಟಕ ಹೊರಹೊಮ್ಮಿದೆ.

ಕೆಡೆಟ್ ಬಾಲಕಿಯರ ವಿಭಾಗದಲ್ಲಿ (11ವರ್ಷದೊಳಗಿನವರು) ಬೆಳ್ಳಿ ಪದಕ ಕೊರಳಿಗೇರಿಸಿಕೊಳ್ಳುವ ಮೂಲಕ ಕರ್ನಾಟಕ ತಂಡದ ಆಟಗಾರರು ಸಂಭೃಮಿಸಿದ್ದಾರೆ.  ಕೈಗಾದ ಆದ್ಯಾ ನಾಯ್ಕ ನೇತೃತ್ವದ ತಂಡ ಹರ್ಯಾಣ ಎದುರು 6-0, ಆಂದ್ರಪ್ರದೇಶ ಎದುರು 3-0ವಿಜಯಿಯಾಗಿತ್ತು. ನಂತರ ಕೇರಳ ಜೊತೆಗೆ  2-0,  ತಮಿಳುನಾಡು ಜೊತೆ 4-0 ಅಂತರದಿಂದ ಗೆಲುವು ಸಾಧಿಸಿತ್ತು. ನಂತರ ಕೇರಳ ತಂಡದ ಜೊತೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ 3-1 ನಂತರದಲ್ಲಿ ಗೆಲುವಿನ ಕೇಕೆ ಹಾಕಿ ಸಂಭೃಮಿಸಿತ್ತು. ಬಳಿಕ ಪಂಜಾಬ್ ಜೊತೆ ನಡೆದ ಫೈನಲ್ ಪಂದ್ಯದಲ್ಲಿ 1- 2ಅಂತರಗಳಿಂದ ಪರಾಭವಗೊಂಡು ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ.

ತಂಡದಲ್ಲಿದ್ದವರು: ಆದ್ಯಾ ನಾಯ್ಕ ಕೈಗಾ (ಕ್ಯಾಪ್ಟನ್), ಭವನೀತ ತುಮಕೂರು, ದೇದಿಪ್ಯ ತುಮಕೂರು, ಅಕ್ಷರಾ ಶಿರಸಿ, ಐಶ್ವರ್ಯ ತುಮಕೂರು, ಕವನ ತುಮಕೂರು, ಸನ್ನಿಧಿ ತುಮಕೂರು, ಅಹನಾ ನಾಯ್ಕ ಕಾರವಾರ, ಕುಶಾಲ ಬೆಂಗಳೂರು, ಅನಯಾ ಕಾರವಾರ‌ ತಂಡವನ್ನ ಪ್ರತಿನಿಧಿಸಿದ್ದರು.

ಕೆಡೆಟ್ ಮಿಕ್ಸಡ್ ವಿಭಾಗದಲ್ಲಿ ಆರಂಭದ ಪಂದ್ಯ ತಮಿಳುನಾಡು ಜೊತೆ ಸಮಬಲ, ಆಂದ್ರಪ್ರದೇಶ, ಕೇರಳ , ಎದುರು ಗೆದ್ದು ಸೆಮಿಫೈನಲ್‌ ತಲುಪಿತ್ತು. ಬಳಿಕ ಮತ್ತೆ ಎದುರಾದ ಕೇರಳ ಜೊತೆಗಿನ ಸೆಮಿಫೈನಲ್‌ ಪಂದ್ಯದಲ್ಲಿ ಪರಾಭವಗೊಂಡಿತ್ತು. ನಂತರ ಅಂಕಗಳ ಆಧಾರದ ಮೇಲೆ ಮೂರನೇ ಸ್ಥಾನಕ್ಕಾಗಿ ಆಂದ್ರಪ್ರದೇಶ ತಂಡದೊದಿಗೆ ನಡೆದ ಪಂದ್ಯದಲ್ಲಿ 1-3 ಅಂಕ ಗಳಿಸಿ ಕಂಚಿನ ಪದಕಕ್ಕಾಗಿ ತೃಪ್ತಿಪಟ್ಟುಕೊಂಡಿತ್ತು. 

ತಂಡದಲ್ಲಿದ್ದವರು:  ಆದ್ಯಾ ನಾಯ್ಕ ಕೈಗಾ (ಕ್ಯಾಪ್ಟನ್), ಭವನೀತ ತುಮಕೂರು, ದೇದಿಪ್ಯ ತುಮಕೂರು, ಅಕ್ಷರಾ ಶಿರಸಿ, ರಾಜಗುರು ಶಿರಸಿ, ಸಾಕಿಬ್ ಕೈಗಾ, ಅಯ್ಯನ್ ಕೈಗಾ, ಶ್ರೀಶ ಶೇಷಗಿರಿ ಮೊಗೇರ ಕಾರವಾರ, ಐಶ್ವರ್ಯ ತುಮಕೂರು, ದಕ್ಷತ್ ತುಮಕೂರು ಕರ್ನಾಟಕ ತಂಡವನ್ನ ಪ್ರತಿನಿಧಿಸಿದ್ದರು.

ಸಬ್ ಜ್ಯೂನಿಯರ್ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವೂ ತಮಿಳುನಾಡು, ತೆಲಂಗಾಣ, ಜಮ್ಮು ಕಾಶ್ಮೀರ, ಆಂದ್ರಪ್ರದೇಶ ತಂಡವನ್ನ ಮಣಿಸಿತ್ತು. ನಂತರ ಚಂಡಿಗಢ ಜೊತೆಗೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಸೋಲನ್ನಪ್ಪಿತು. ಬಳಿಕ ಮೂರನೇ ಸ್ಥಾನಕ್ಕಾಗಿ ಕೇರಳ ತಂಡದ ಜೊತೆಗೆ ನಡೆದ ಹಣಾಹಣಿಯಲ್ಲಿ 3-1 ಪಾಯಿಂಟ್‌ಗಳಿಂದ ಗೆಲುವು ಸಾಧಿಸಿದೆ.

ತಂಡದಲ್ಲಿದ್ದವರು: ಮಾನ್ಯತಾ ಶಿರಸಿ(ಕ್ಯಾಪ್ಟನ್), ಮಾನ್ಯ ಬಿ ಎಸ್ ಶಿರಸಿ, ಅಪೂರ್ವ ಕಾರವಾರ, ಕೀರ್ತಿ ಮುಂಡಗೋಡು, ಮಾನಸಿ ಬೆಳಗಾವಿ, ಆರಾಧ್ಯ ಮೆನನ್ ಕಾರವಾರ, ಯಶಸ್ವಿನಿ ಬೆಂಗಳೂರು, ಚಿನ್ಮಯಿ ಬೆಂಗಳೂರು, ಆರ್ಯ ಮಂಜುನಾಥ ಬೆಂಗಳೂರು. 

ಒಟ್ಟಾರೆ ಟೂರ್ನಿಯಲ್ಲಿ  ಕೈಗಾದ ಆದ್ಯಾ ನಾಯ್ಕ, ರಾಜಗುರು, ಭುವನೀತ, ಮಾನ್ಯತಾ, ಅಪೂರ್ವ ಕರ್ನಾಟಕ ತಂಡದ ಪರವಾಗಿ ಉತ್ತಮ ಆಟ ಪ್ರದರ್ಶಿಸಿದ್ದಾರೆ. ಕರ್ನಾಟಕ ತಂಡದ ಆಟಗಾರರಿಗೆ ದಿಲೀಪ ಹಣಬರ ತರಬೇತಿ ನೀಡಿದ್ದರು. ಮಕ್ಕಳ ಸಾಧನೆಗೆ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ಅಭಿನಂದನೆ ಸಲ್ಲಿಸಿದೆ.

Read These Next

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್