ಬೆಂಗಳೂರು: 681 ಕೆಜಿ ಗಾಂಜಾ ವಶ; 8 ಮಂದಿ ಸೆರೆ

Source: S.O. News Service | By MV Bhatkal | Published on 1st March 2021, 7:51 PM | State News | Don't Miss |

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ಬಂಧಿಸಿರುವ ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ(ಎನ್ ಸಿಬಿ) ಅಧಿಕಾರಿಗಳು 681 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಎಸ್. ಪವಾರ್, ವಿ. ಪವಾರ್, ಬಿ. ವೇರ್, ಎಂ. ದೋತ್ರೆ, ಡಿ. ದೇಶಮುಖ, ಆರ್. ಗುಂಜಲ್, ಎ. ಗಾಂಧಿ, ಎಸ್. ಸನಪ್ ಬಂಧಿತ ಆರೋಪಿಗಳಾಗಿದ್ದಾರೆ.
ಆಂಧ್ರ ಪ್ರದೇಶ, ಒಡಿಶಾ ಗಡಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಎನ್​ಸಿಬಿ ತಂಡ ಯಶಸ್ವಿಯಾಗಿದೆ. ಆರೋಪಿಗಳು, 2 ಕೆಜಿ ತೂಕದ 335 ಗಾಂಜಾ ಪ್ಯಾಕೆಟ್​ಗಳನ್ನು ಪುಣೆ ಅಹಮದಾಬಾದ್ ಮತ್ತು ಗೋವಾಕ್ಕೆ ಸರಬರಾಜು ಮಾಡುತ್ತಿದ್ದರು.
ಗಾಂಜಾ ಸಾಗಿಸಲು ಬಳಕೆ ಮಾಡುತ್ತಿದ್ದ ಸ್ವಿಫ್ಟ್ ಡಿಸೈರ್, ಹೋಂಡಾ ಸಿಟಿ ಕಾರು, ಬೊಲೆರೋ ಪಿಕಪ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ಮತ್ತು ಹೈದರಾಬಾದ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...