ವಿದೇಶದಿಂದ ಆಗಮಿಸುವವರಿಗೆ 7 ದಿನ ಕಡ್ಡಾಯ ಕ್ವಾರಂಟೈನ್‌, ನಿಯಮ ಬದಲಿಸಿದ ಕೇಂದ್ರ

Source: S O News | By I.G. Bhatkali | Published on 8th January 2022, 11:22 AM | State News | National News |

ಹೊಸದಿಲ್ಲಿ: ದೇಶದಲ್ಲಿ ಏರಿಕೆಯಾಗುತ್ತಿರುವ ಒಮೈಕ್ರಾನ್ ಸೋಂಕಿನ ಪ್ರಕ ರಣಗಳ ಸಂಖ್ಯೆಯನ್ನು ಹತೋಟಿಗೆ ತರಲು ಮಂಗಳವಾರದಿಂದ ಅನ್ವಯವಾಗು ವಂತೆ ನೂತನ ಪ್ರಯಾಣ ನಿಯಮಗಳು ಅನುಷ್ಠಾನಕ್ಕೆ ಬರಲಿದ್ದು, ವಿದೇಶದಿಂದ ಆಗಮಿಸುವ ಪ್ರಯಾಣಿಕರು ಭಾರತಕ್ಕೆ ತಲುಪಿದ ಬಳಿಕ ಏಳು ದಿನಗಳ ಹೋಮ್ ಕ್ವಾರಂಟೈನ್‌ಗೆ ಒಳಗಾಗಬೇಕಾದ ಅಗತ್ಯತೆ ಇದೆ ಹಾಗೂ 8ನೇ ದಿನ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು.

ಅಪಾಯದಲ್ಲಿರುವ ದೇಶಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಡಿಸೆಂಬರ್‌ನಿಂದ 9ಕ್ಕಿಂತಲೂ ಹೆಚ್ಚು ರಾಷ್ಟ್ರಗಳು ಅಪಾಯದಲ್ಲಿರುವ ದೇಶಗಳ ಪಟ್ಟಿಯಲ್ಲಿ ಸೇರಿವೆ.

ಎಲ್ಲ ಪ್ರಯಾಣಿಕರು 7 ದಿನಗಳ ಕಾಲ ಹೋಮ್ ಐಸೋಲೇಶನ್‌ಗೆ ಒಳಗಾಗ ಬೇಕು. ಆನಂತರ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಬೇಕು. ಒಂದು ವೇಳೆ ಪರೀಕ್ಷೆ ವರದಿ ಪಾಸಿಟಿವ್ ಬಂದರೆ, ಅವರನ್ನು ಐಸೋಲೇಶನ್‌ಗೆ ಕಳುಹಿಸಲಾಗುವುದು. ಅಲ್ಲದೆ, ಅವರ ಮಾದರಿಯನ್ನು ಜಿನೋಮ್ ಪರೀಕ್ಷೆಗೆ ಕಳುಹಿಸಲಾಗುವುದು. ಅವರ ಸಮೀಪ ಕುಳಿತುಕೊಂಡ ಇತರ ಪ್ರಯಾಣಿಕರು, ವಿಮಾನ ಸಿಬ್ಬಂದಿಯನ್ನು 'ಸಂಪರ್ಕ' ಎಂದು ಪರಿಗಣಿಸಲಾಗುವುದು. ಒಂದು ವೇಳೆ ಪರೀಕ್ಷೆ ವರದಿ ನೆಗೆಟಿವ್ ಬಂದರೆ, ಪ್ರಯಾ ಣಿಕರು ತಮ್ಮ ಆರೋಗ್ಯವನ್ನು ಮುಂದಿನ 7 ದಿನಗಳ ಕಾಲ ಸ್ವ ನಿಗಾ ವಹಿಸಬೇಕು. ಅಪಾಯದ ಪಟ್ಟಿಯಲ್ಲಿ ಇರದ ದೇಶಗ ಳಿಂದ ಆಗಮಿಸುವ ವಿಮಾನಗಳಿಂದ ಯಾದೃಚ್ಛಿಕವಾಗಿ ಶೇ.2 ಪ್ರಯಾಣಿಕರನ್ನು ಆಯ್ಕೆ ಮಾಡಿ ಪರೀಕ್ಷೆಗೆ ಒಳಪಡಿಸಲಾಗುವು ದು ಎಂದು ನಿಯಮ ಹೇಳಿದೆ. ಪರೀಕ್ಷೆಯ ವೇಳೆ ಪ್ರಯಾಣಿ ಕರಲ್ಲಿ ರೋಗ ಲಕ್ಷಣಗಳು ಕಂಡು ಬಂದರೆ ಐಸೋಲೇಷನ್‌ಗೆ ಒಳಪಡಿಸಲಾಗುವುದು ಹಾಗೂ ವೈದ್ಯಕೀಯ ಸೌಲಭ್ಯಕ್ಕೆ ಕರೆ ದೊಯ್ಯಲಾಗುವುದು. ಒಂದು ವೇಳೆ ಪರೀಕ್ಷೆಯ ವರದಿಯಲ್ಲಿ ಪಾಸಿಟಿವ್ ಬಂದರೆ, ಅವರ ಸಂಪರ್ಕವನ್ನು ಗುರುತಿಸಲಾಗು ವುದು ಎಂದು ನಿಯಮ ತಿಳಿಸಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...