ಮಹಾರಾಷ್ಟ್ರ: ಔಷಧ ಕಾರ್ಖಾನೆಯಲ್ಲಿ ಬೆಂಕಿ ಅವಘಡ 7 ಮಂದಿ ಸಾವು, ಹಲವರಿಗೆ ಗಾಯ

Source: Vb | By I.G. Bhatkali | Published on 5th November 2023, 7:56 AM | National News |

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟದಿಂದ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ.

ರಾಯಗಢ ಜಿಲ್ಲೆಯಲ್ಲಿ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಶುಕ್ರವಾರ ರಾತ್ರಿ ಸುಮಾರು 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು ಎಂದು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್‌ಡಿಆರ್‌ಎಫ್) ಹೇಳಿದೆ. “ನಿನ್ನೆ ರಾತ್ರಿ ಸ್ಫೋಟ ಸಂಭವಿಸಿದ ರಾಯಗಢ ಜಿಲ್ಲೆಯ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಎನ್‌ಡಿಆರ್‌ಎಫ್ ಮತ್ತೊಂದು ಮೃತದೇಹವನ್ನು ಪತ್ತೆ ಹಚ್ಚಿದೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ' ಎಂದು ಅದು ತಿಳಿಸಿದೆ. ಶಾರ್ಟ್ ಸರ್ಕ್ಯೂಟ್‌ ನಿಂದ ಈ ಬೆಂಕಿ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...