ಬೆಳಗಾವಿಯ ಮೂಡಲಗಿ ಬಳಿ ಚರಂಡಿಯಲ್ಲಿ 7 ಭ್ರೂಣಗಳು ಪತ್ತೆ!

Source: The New Indian Express | By MV Bhatkal | Published on 26th June 2022, 12:17 AM | State News |

ಬೆಳಗಾವಿ: ಬೆಳಗಾವಿ ಸಮೀಪದ ಮೂಡಲಗಿಯ ಸೇತುವೆ ಬಳಿಯ ತೆರೆದ ಚರಂಡಿಯಲ್ಲಿ ಐದು ಚಿಕ್ಕ ಡಬ್ಬಿಗಳಲ್ಲಿ ಏಳು ಭ್ರೂಣಗಳು ಶುಕ್ರವಾರ ತೇಲಿ ಬಂದಿದ್ದು, ಇದನ್ನು ಕಂಡ ಜನರು ಬೆಚ್ಚಿ ಬಿದ್ದಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ.ಮಹೇಶ ಕೋಣೆ ಅವರು ಮಾತನಾಡಿ, ಭ್ರೂಣಗಳು ಸುಮಾರು ಐದರಿಂದ ಏಳು ತಿಂಗಳ ವಯಸ್ಸಿನವು. ಪತ್ತೆಯಾದ ಭ್ರೂಣಗಳನ್ನು ಬೆಳಗಾವಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ, ಪ್ರಕರಣ ಸಂಬಂಧ ತನಿಖೆಯನ್ನು ತೀವ್ರಗೊಳಿಸಲಾಗಿದ್ದು, ಸಮಿತಿಯನ್ನು ರಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೆಎಂಎಫ್ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಾತನಾಡಿ, ಘಟನೆಯು ಸಮಾಜವನ್ನು ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡುವ ಅನಾಗರಿಕ ಘಟನೆ ಎಂದು ಬಣ್ಣಿಸಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಈಗಾಗಲೇ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಭ್ರೂಣಗಳ ಲಿಂಗವನ್ನು ಆರೋಗ್ಯ ಇಲಾಖೆ ಇನ್ನೂ ಬಹಿರಂಗಪಡಿಸದಿದ್ದರೂ, ಇದು ಹೆಣ್ಣು ಭ್ರೂಣ ಹತ್ಯೆಯ ಪ್ರಕರಣ ಎಂದು ಶಂಕಿಸಲಾಗಿದೆ. ಮೂಡಲಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...