ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ؛ ಏಳು ಜನರ ದುರ್ಮರಣ

Source: S O News | By I.G. Bhatkali | Published on 14th January 2022, 9:38 AM | State News |

ದಾವಣಗೆರೆ: ಕರ್ನಾಟಕದ ದಾವಣಗೆರೆಯಲ್ಲಿ ಸಂಭವಿಸಿದ ಅಪಾಯಕಾರಿ ರಸ್ತೆ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ.

ಶುಕ್ರವಾರ ಬೆಳಗ್ಗೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರ್ಘಟನೆ ನಡೆದಿದೆ.  

ಅಪಘಾತದಲ್ಲಿಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಯಾದಗಿರಿ ಜಿಲ್ಲೆಯ ಶಾಪುರ್ ಮೂಲದ ಇವರು ಬೆಂಗಳೂರಿನಿಂದ ಹೊಸಪೇಟೆ ಕಡೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಬೆಳಿಗ್ಗೆ 5 ಗಂಟೆಯ ವೇಳೆಗೆ ನಿದ್ದೆಯ ಮಂಪರಿನಲ್ಲಿ ಚಾಲಕ ಡಿವೈಡರ್‌ಗೆ ಕಾರನ್ನು ಗುದ್ದಿರ ಬಹುದು ಎಂದು ಶಂಕಿಸಲಾಗಿದೆ. 

ಸ್ಥಳಕ್ಕೆ ದಾವಣಗೆರೆ ಎಸ್‌ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...