70 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಆರೋಪ;ಹಿರಿಯ ಪೊಲೀಸ್ ಅಧಿಕಾರಿ ವಿರುದ್ಧ ಎ.ಸಿ.ಬಿ. ಪ್ರಕರಣ ದಾಖಲು

Source: sonews | By Staff Correspondent | Published on 24th September 2020, 2:14 PM | National News | Don't Miss |

ಹೈದರಾಬಾದ್ : ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ತೆಲಂಗಾಣ ರಾಜ್ಯದ ಭ್ರಷ್ಟಾಚಾರ ನಿಗ್ರಹ ಬ್ಯುರೋ (ಎಸಿಬಿ)  ರಾಜ್ಯದ ವಿವಿಧೆಡೆ  ರೂ 70 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ಆರೋಪ ಮಾಡಲಾಗಿದೆ.

ಭ್ರಷ್ಟಾಚಾರ ನಿಗ್ರಹ ಬ್ಯುರೋ (ಎಸಿಬಿ) ಪ್ರಕರಣ ದಾಖಲಿಸಿಕೊಂಡಿರುವ  ಹಿರಿಯ ಪೊಲೀಸ್ ಅಧಿಕಾರಿಯನ್ನು  ಯೆಲ್ಮಕುರಿ ನರಸಿಂಹ ರೆಡ್ಡಿ ಎಂದು ಗುರುತಿಸಲಾಗಿದೆ. 

ರಾಜ್ಯದ ವಿವಿಧೆಡೆ ನಡೆಸಿದ ದಾಳಿಗಳಲ್ಲಿ ಈ ಪೊಲೀಸ್ ಅಧಿಕಾರಿಯ ಅಕ್ರಮ ಆಸ್ತಿ ಪತ್ತೆಯಾಗಿತ್ತು.  ರೆಡ್ಡಿ ರಾಜ್ಯದ ಮಲ್ಕಜ್ಗಿರಿ ವಿಭಾಗದಲ್ಲಿರುವ ರಚಕೊಂಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಎಸಿಪಿಯಾಗಿದ್ದಾರೆ.

ಸರಕಾರ ನಿಗದಿ ಪಡಿಸಿದ ಆಸ್ತಿ ಮೌಲ್ಯಗಳನ್ನು ಪರಿಗಣಿಸಿದಾಗ ರೆಡ್ಡಿ ಬಳಿಯಿರುವ ಅಕ್ರಮ ಆಸ್ತಿ ಗಳಿಕೆಯ ಮೌಲ್ಯ ರೂ 7.5 ಕೋಟಿಯಾಗಿದ್ದರೂ ಸ್ಥಳೀಯ ಮಾರುಕಟ್ಟೆಯಲ್ಲಿ ಈ ಆಸ್ತಿಗಳ ಮೌಲ್ಯ  ಅಂದಾಜು ರೂ 70 ಕೋಟಿ ಎಂದು ಎಸಿಬಿ ಹೇಳಿದೆ.

ಖಚಿತ ಮಾಹಿತಿಯ ಮೇರೆಗೆ ಎಸಿಬಿ ಅಧಿಕಾರಿಗಳು  ಹೈದರಾಬಾದ್, ವಾರಂಗಲ್, ಜಂಗೌನ್, ನಲ್ಗೊಂದ, ಕರೀಂನಗರ್ ಜಿಲ್ಲೆಗಳ ಸುಮಾರು 25 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಆಂಧ್ರ ಪ್ರದೇಶದ ಅನಂತಪುರ್ ಜಿಲ್ಲೆಯಲ್ಲೂ ದಾಳಿ ನಡೆದಿತ್ತು.

ರೆಡ್ಡಿ ಅವರ ಒಡೆತನದಲ್ಲಿ ಅನಂತಪುರದಲ್ಲಿ 55 ಎಕರೆ ಕೃಷಿ ಭೂಮಿ, ಮಾಧಪುರ್ ಎಂಬಲ್ಲಿ 1,960 ಚದರ ಯಾರ್ಡ್‍ಗಳ ನಾಲ್ಕು   ಜಮೀನು, ಹಫೀಝ್‍ಪೇಟೆಯಲ್ಲೂ ಜಮೀನು,  ಎರಡು ಮನೆ, ರೂ 15 ಲಕ್ಷ ನಗದು,  ಎರಡು ಬ್ಯಾಂಕ್ ಲಾಕರುಗಳು, ರಿಯಲ್ ಎಸ್ಟೇಟ್‍ನಲ್ಲಿ ಹೂಡಿಕೆ ಹಾಗೂ ಇತರ ಉದ್ಯಮಗಳಲ್ಲಿ ಅವರು ಹೂಡಿಕೆ ಮಾಡಿರುವುದು ಪತ್ತೆಯಾಗಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...