ಗ್ರಾಮ ಪಂಚಾಯತ ಚುನಾವಣೆ ಪೊಲೀಸ್ ಬಂದೋಬಸ್ತ್ ಗಾಗಿ 725 ಅಧಿಕಾರಿ, ಸಿಬ್ಬಂದಿಗಳ ನೇಮಕ: ಎಸ್.ಪಿ. ಕೃಷ್ಣಕಾಂತ

Source: SO News | By Laxmi Tanaya | Published on 18th December 2020, 9:09 PM | State News | Don't Miss |

ಧಾರವಾಡ : ಬರುವ ಡಿಸೆಂಬರ್ 22 ರಂದು ಮೊದಲ ಹಂತದಲ್ಲಿ ಜಿಲ್ಲೆಯ ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕುಗಳ ವಿವಿಧ ಗ್ರಾಮ ಪಂಚಾಯತಿಗಳ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮತ್ತು ಚುನಾವಣೆಗಳು ಮುಕ್ತ, ನ್ಯಾಯಸಮ್ಮತ, ನಿಷ್ಪಕ್ಷಪಾತವಾಗಿ ನಡೆಯಲು ಅನುಕೂಲವಾಗುವಂತೆ ಅಧಿಕಾರಿ, ಪೊಲೀಸ್ ಪೇದೆಗಳು ಸೇರಿದಂತೆ  ಒಟ್ಟು 725 ಸಿಬ್ಬಂದಿಗಳನ್ನು ನೇಮಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಆದೇಶಿಸಿದ್ದಾರೆ.

 ಈ ಕುರಿತು ಪ್ರಕಟಣೆ ನೀಡಿರುವ ಅವರು, ಮತದಾನ ನಡೆಯುವ ಸಾಮಾನ್ಯ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳ ಅನುಸಾರ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಲಾಗಿದೆ.

 ಧಾರವಾಡ, ಕಲಘಟಗಿ, ಅಳ್ನಾವರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಲು 4 ಜನ ಡಿವೈಎಸ್ ಪಿ, 10 ಜನ ಸಿಪಿಐ, 17 ಜನ ಪಿಎಸ್‍ಐ, 49 ಜನ ಎಎಸ್‍ಐ, 318 ಹೆಡ್ ಕಾನಸ್ಟೆಬಲ್, ಕಾನಸ್ಟೆಬಲ್‍ಗಳು, 132 ಹೋಮ್ ಗಾಡ್ರ್ಸ್ ಮತ್ತು 195 ಜನ ಜೈಲ್ ವಾರ್ಡ್‍ನ್ ಗಳನ್ನು  ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...