ಕಳೆದ 5 ವರ್ಷಗಳಲ್ಲಿ ಹೈಕೋರ್ಟ್‌ಗೆ ನೇಮಕಗೊಂಡ ಶೇ.75ಕ್ಕೂ ಅಧಿಕ ನ್ಯಾಯಾಧೀಶರು ಮೇಲ್ವಾತಿಗೆ ಸೇರಿದವರು; ಕೇಂದ್ರ ಸರ್ಕಾರ

Source: Vb | By I.G. Bhatkali | Published on 23rd July 2023, 3:00 PM | National News |

ಹೊಸದಿಲ್ಲಿ: 2018ರಿಂದ ಉಚ್ಚ ನ್ಯಾಯಾಲಯಕ್ಕೆ ನೇಮಕಗೊಂಡ ಶೇ. 75ಕ್ಕೂ ಅಧಿಕ ನ್ಯಾಯಾಧೀಶರು ಮೇಲ್ವಾತಿಗೆ ಸೇರಿದವರು ಎಂದು ಕೇಂದ್ರ ಸರಕಾರ ಹೇಳಿದೆ.

ಲೋಕಸಭೆಯಲ್ಲಿ ಶುಕ್ರವಾರ ಎಐಎಂಐಎಂ ಸಂಸದ ಅಸಾದುದ್ದೀನ್ ಉವೈಸಿ ಅವರು, “ಕಳೆದ 5 ವರ್ಷಗಳ ಅವಧಿಯಲ್ಲಿ ಹೈಕೋರ್ಟ್‌ಗೆ ನೇಮಕಗೊಂಡ ಶೇ. 79 ನ್ಯಾಯಾಧೀಶರು ಮೇಲ್ತಾತಿಯವರು ಎಂಬುದು ಸತ್ಯವೇ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್‌ ಅವರು ಈ ಅಂಕಿ-ಅಂಶ ಬಹಿರಂಗಪಡಿಸಿದ್ದಾರೆ.

ಈ ಅವಧಿಯಲ್ಲಿ 18 (ಶೇ.2.98) ಪರಿಶಿಷ್ಟ ಜಾತಿ, 9 (1.49) ಪರಿಶಿಷ್ಟ ಪಂಗಡಕ್ಕೆ ಸೇರಿದವರು ನ್ಯಾಯಾಧೀಶರಾಗಿ ನೇಮಕರಾಗಿದ್ದಾರೆ ಎಂದು ಅಂಕಿ-ಅಂಶ ಬಹಿರಂಗಪಡಿಸಿದೆ.

ಇದೇ ಅವಧಿಯಲ್ಲಿ 72 (ಶೇ. 11.92) ಇತರ ಹಿಂದುಳಿದ ವರ್ಗ, 34 (ಶೇ. 5.6) ಅಲ್ಪಸಂಖ್ಯಾತರು ನ್ಯಾಯಾಧೀಶರಾಗಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕರಾಗಿದ್ದಾರೆ.

ಸುಪ್ರೀಂ ಕೋರ್ಟ್ ಹಾಗೂ ಉಚ್ಚ ನ್ಯಾಯಾಲಯಕ್ಕೆ ನ್ಯಾಯಾಧೀಶರ ನೇಮಕವನ್ನು ಸಂವಿಧಾನದ ಕಲಂ 124, 217 ಹಾಗೂ 224ರ ಅಡಿಯಲ್ಲಿ ಮಾಡಲಾಗಿದೆ. ಈ ಕಲಂ ಅಡಿಯಲ್ಲಿ ವ್ಯಕ್ತಿಯ ಯಾವುದೇ ಜಾತಿ ಅಥವಾ ವರ್ಗಕ್ಕೆ ಮೀಸಲಾತಿ ಒದಗಿಸಿಲ್ಲ ಎಂದು ಮೇಘವಾಲ್ ಹೇಳಿದ್ದಾರೆ.

ಆದರೂ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನೇಮಕಾತಿಯಲ್ಲಿ ಸಾಮಾಜಿಕ ವೈವಿಧ್ಯತೆ ಖಚಿತಪಡಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರ ಹಿಂದುಳಿದ ವರ್ಗ, ಮಹಿಳೆಯರು ಹಾಗೂ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಸೂಕ್ತ ಅಭ್ಯರ್ಥಿಗಳನ್ನು ಪರಿಗಣಿಸಬೇಕು ಎಂದು ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸುವಾಗ ಸರಕಾರ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳನ್ನು ಕೋರಿಕೊಳ್ಳುತ್ತಿದೆ' ಎಂದು ಅವರು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನೇಮಕಾತಿ ಕಾರ್ಯ ವಿಧಾನದ ಮೆಮೊರಂಡಂ ಪ್ರಕಾರ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದ ವ್ಯಕ್ತಿಗಳನ್ನು ಮಾತ್ರವೇ ಸರಕಾರ ನೇಮಕಗೊಳಿಸಬೇಕು ಎಂದು ಮೇಘವಾಲ್ ಹೇಳಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...