750 ರೂ. ಕೋಟಿ ವೆಚ್ಚದಲ್ಲಿ ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು:ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್

Source: S.O. News Service | By MV Bhatkal | Published on 3rd July 2019, 3:43 PM | State News | Don't Miss |

ಕಲಬುರಗಿ:ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. 
ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ ಸಾಕಾರಗೊಳಿಸಿ, ಕಲಬುರಗಿ ನಗರಕ್ಕೆ ನಿರಂತರ 24ಘಿ7 ಕುಡಿಯುವ ನೀರು ಪೂರೈಸಲಾಗುವುದು ಎಂದು ಅವರು ಧೃಡ ವಿಶ್ವಾಸದಿಂದ ನುಡಿದರು.
ನಗರ ಪ್ರತಿವರ್ಷ ಬೆಳೆಯುತ್ತಾ ಹೋಗುತ್ತಿದೆ. ಇಂದು ನಗರದ ಜನಸಂಖ್ಯೆ ಅಧಿಕವಾಗುತ್ತಿದೆ. ಆ ಕಾರಣದಿಂದಾಗಿ ನೀರು ಕೂಡ ಅದೇ ಪ್ರಮಾಣದಲ್ಲಿ ಬೇಕಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.
ಕಲಬುರಗಿ ಮಹಾನಗರದಲ್ಲಿ ಐಎಸ್‍ಐ ಗುರುತು ಇಲ್ಲದ ನೀರಿನ ಕ್ಯಾನ್ ವಾಟರ್ ಮಾರುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸ್ಮಾರ್ಟ್ ಸಿಟಿ ಕೇಂದ್ರ ಸರ್ಕಾರ ಮಾಡುವಂತಹದ್ದು, ಅದಕ್ಕೆ ನಾವು ಕಾಯ್ತಿಲ್ಲ. ರಾಜ್ಯ ಈಗಾಗಲೇ ಎಲ್ಲಾ ರೀತಿಯಿಂದ ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಮಾದರಿಯಲ್ಲೇ ಅಭಿವೃದ್ಧಿ ಪಡಿಸುತ್ತಿದೆÉ. ಈ ನಿಟ್ಟಿನಲ್ಲಿ ಈಗಾಗಲೇ ಪೊಲೀಸ್ ಆಯುಕ್ತರ ಕಾರ್ಯಾಲಯ, ರಿಂಗ್ ರೋಡ್ ಸೇರಿದಂತೆ ಹಲವು ಕೆಲಸಗಳನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಹೆಮ್ಮೆಯಿಂದ ಹೇಳಿದರು.
ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಅವರ ಪರಿಶ್ರಮದಿಂದ ಹೈದ್ರಾಬಾದ-ಕರ್ನಾಟಕಕ್ಕೆ 371ಜೆ ಬಂದ ನಂತರ 30 ಸಾವಿರ ಉದ್ಯೋಗ ಸೃಷ್ಟಿಯಾಗಿವೆ. ಖಾಲಿ ಹುದ್ದೆಗಳ ತುಂಬುವ ನಿಟ್ಟಿನಲ್ಲಿ ಹೈದ್ರಾಬಾದ್ ಕರ್ನಾಟಕ ಬಿಟ್ಟು ಬೇರೆ ಜಿಲ್ಲೆಗಳಲ್ಲಿ ಹೆಚ್ಚು ಸೇವೆ ಸಲ್ಲಿಸಿರುವ ಅಧಿಕಾರಿಗಳನ್ನು ಈ ಭಾಗಕ್ಕೆ ವರ್ಗಾಯಿಸುವಂತಹ ಕೆಲಸ ನಡೆದಿದೆ ಎಂದು ಅವರು ಹೇಳಿದರು.
ರಾಜ್ಯದ ಎಲ್ಲಾ ಮಹಾನಗರಗಳ ವ್ಯಾಪ್ತಿಯಲ್ಲಿ ಎಲ್ಲಿ ದೊಡ್ಡ ಕಾಲುವೆಗಳು ಇವೆಯೋ ಅವುಗಳನ್ನು ಸಂಪೂರ್ಣವಾಗಿ ದುರಸ್ತಿ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕಾಮಗಾರಿಯನ್ನು ಅದಷ್ಟು ಬೇಗ ಕೈಗೊಳ್ಳಲಾಗುವುದು. ರಸ್ತೆ ಅಭಿವೃದ್ಧಿ ಸೇರಿದಂತೆ ನಗರ ಅಭಿವೃದ್ಧಿಗೆ 8 ಲಕ್ಷಕ್ಕಿಂತ ಜನಸಂಖ್ಯೆ ಕಡಿಮೆ ಇರುವ ರಾಜ್ಯದ ಮಹಾನಗರ ಪಾಲಿಕೆಯಲ್ಲಿ ಈ ವರ್ಷ 125 ಕೋಟಿ ರೂ.ಗಳು ಬಿಡುಗಡೆ ಮಾಡಿದ್ದೇವೆ. 10 ಲಕ್ಷ ಜನಸಂಖ್ಯೆ ಇರುವ ಮಹಾನಗರಗಳಿಗೆ 150 ಕೋಟಿ ರೂ.ಗಳು ಬಿಡುಗಡೆ ಮಾಡಿದ್ದೇವೆ ಎಂದು ವಿವರಿಸಿದರು.
ನಗರದಲ್ಲಿ ಕಟ್ಟಡವನ್ನು ಒಂದು ನಿಯಮ ಬದ್ಧವಾಗಿ ನಿರ್ಮಾಣ ಮಾಡುವುದಕ್ಕೆ ಮಹಾನಗರ ಪಾಲಿಕೆಗೆ ಅನುಮತಿ ಕೊಟ್ಟಿದ್ದೇವೆ. ಮನೆಗಳನ್ನು ಕಟ್ಟಿಕೊಳ್ಳುವವರು ಇನ್ನು ಮುಂದೆ ಆನ್‍ಲೈನ್ ಮೂಲಕ ತಮ್ಮ ಮನೆಯನ್ನು ನೋಂದಣಿ ಮಾಡಿಕೊಳ್ಳಬಹುದು. 40 ದಿನಗಳಲ್ಲಿ ನಿಮಗೆ ಅನುಮತಿ ಪತ್ರ ನೀಡಲಾಗುತ್ತದೆ ಅಥವಾ ಬೇರೆ ಸಮಸ್ಯೆ ಇದ್ದರೆ ಅದನ್ನು ಕೂಡ ಆನ್‍ಲೈನ್‍ನಲ್ಲಿ ತಿಳಿಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾ ಶಾಸಕರುಗಳಾದ ದತ್ತಾತ್ರೇಯ ಸಿ. ಪಾಟೀಲ್ ರೇವೂರ್, ಬಸವರಾಜ ಮುತ್ತಿಮೂಡ, ಕನೀಜ್ ಫಾತೀಮಾ, ಡಾ|| ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಬಿ.ಜಿ. ಪಾಟೀಲ, ತಿಪ್ಪಣ್ಣಪ್ಪ ಕಮಕನೂರ ಹಾಗೂ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಜುಂ ಪರ್ವೇಜ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾದ ಬಿ. ಫೌಜಿಯಾ ತರನ್ನಮ್, ಮಹಾನಗರಪಾಲಿಕೆ ಕಾರ್ಯನಿರ್ವಾಹಕ ಅಭಿಯಂತರರಾದ ಶಿವನಗೌಡ ಮುಂತಾದವರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...