ಭಟ್ಕಳದ ತಾಲೂಕಾ ಕ್ರೀಡಾಂಗಣದಲ್ಲಿ ಸಂಭ್ರಮ ಸಡಗರದಿಂದ ನಡೆದ 76ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ

Source: SO NEWS | By MV Bhatkal | Published on 16th August 2022, 12:06 AM | Coastal News |

ಭಟ್ಕಳ:ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಭಟ್ಕಳ ಹಾಗೂ ಜಾಲಿ ಪಟ್ಟಣ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ 
ಆಚರಿಸಿದರು 

76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್  ನೆರವೇರಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ದಿನಾಚರಣೆಯನ್ನು ತ್ಯಾಗ ಬಲಿದಾನಗಳ ಕಾರಣಗಳಿಂದಾಗಿ ಬ್ರಿಟಿಷರ ದಾಸ್ಯದ ಸಂಕೋಲೇಯಿಂದ ಬಿಡುಗಡೆಯಾಗಿರುವ ಸ್ವಾತಂತ್ರ್ಯ ಭಾರತಕ್ಕಾಗಿ ಕಾರಣೀಭೂತರಾಗಿರುವವರಿಗೆ ಗೌರವ ಅರ್ಪಿಸುವ ಸುದಿನವಾಗಿದೆ. ಆಜಾದಿ ಕಾ ಅಮೃತ ಮಹೋತ್ಸವ ಹರ್ ಘರ್ ತಿರಂಗಾ ಶೀರ್ಷಿಕೆ ಅಡಿ ಪ್ರತಿ ಮನೆ, ಸರ್ಕಾರಿ ಕಚೇರಿ, ಸರ್ಕಾರೇತರ ಕಟ್ಟಡಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿದ್ದು. ಪುರಾತತ್ವ ಇಲಾಖೆಯ 150 ಸ್ಮಾರಕದ ಮೇಲೆ ತ್ರಿವರ್ಣ ಧ್ವಜದ ವಿದ್ಯುತ್ ಅಲಂಕಾರದಿಂದ ಕಂಗೊಳಿಸಿರುವುದನ್ನು ನೋಡಿದ್ದೇವೆ ಎಂದ ಅವರು ಈ ದಿನ ಮಹಾತ್ಮಾ ಗಾಂಧೀಜಿಯವರ ಸತ್ಯಾಗ್ರಹ, ಶಾಂತಿ ಮತ್ತು ಅಹಿಂಸೆ ಭಗತ್ ಸಿಂಗರ ಇನ್ ಕಿಲ್ಲಾ ಬಾದ್ ಜಿಂದಾ ಬಾದ್, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೈ ಜವಾನ್ ಜೈ ಕಿಸಾನ್ ಪ್ರತತ್ವಗಳನ್ನು ನೆನೆದು ಸುಭಾಷ್ ಚಂದ್ರ ಬೋಸರ ಗಿವ್ ಮಿ ಯುವರ್ ಬ್ಲಡ್ ಐ ವಿಲ್ ಗಿವ್ ಯುವರ್ ಫ್ರಿಡಂ ರ ನಾಣ್ನುಡಿಗಳಲ್ಲಿ ಅಡಗಿರುವ ಎಲ್ಲಾ ದೇಶ ಪ್ರೇಮವನ್ನು ಸ್ಮರಿಸುವ ದಿನ ವಾಗಿದೆ ಎಂದರು. 

ನಂತರ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ಸುನೀಲ ನಾಯ್ಕ ಈ ವರ್ಷದ 
ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಶೇಷ ಹಾಗೂ ಅದ್ಭುತ ವಾಗಿದ್ದು ಹರ್ ಘರ್ ತಿರಾಂಗ ಎನ್ನುವ ವಿನೂತನ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದಾರೆ. ಅದೇ ರೀತಿ 120ಕೋಟಿಗೂ ಅಧಿಕ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ದೇಶದ ಮೇಲೆ ಪ್ರೀತಿಯನ್ನು ತೋರಿಸಿದ್ದಾರೆ. ಅಂದು ಅನೇಕರ ಶ್ರಮ ಬಲಿದಾನದಿಂದ ಹಾಗೂ ಅನೇಕ ಹೋರಾಟಗಾರರ ರಕ್ತದ ಕಲೆಯಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅಂಥವರನ್ನು ನೆನಪಿಸಿಕೊಳ್ಳಲು ದಿನವಾಗಿದೆ ಎಂದ ಅವರು ಇತಿಹಾಸವನ್ನು ನೆನಪು ಮಾಡಿಕೊಳ್ಳುವ ಕೆಲಸ ನಾವೆಲ್ಲರೂ ಮಾಡಬೇಕು ಎಂದರು  

ಇದಕ್ಕೂ ಪೂರ್ವದಲ್ಲಿ ಪೊಲೀಸ ಇಲಾಖೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು.ಹಾಗೂ ನೆರೆಹಾವಳಿ ಸಂದರ್ಭದಲ್ಲಿ ಶ್ರಮಿಸಿದ ನುಡಲ್ ಅಧಿಕಾರಿಗಳಿಗೆ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ತಾಲೂಕಾ ಆಡಳಿತವತಿಯಿಂದ ಸನ್ಮಾನಿಸಿ ಗೌರವಿಸಿದರು

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...