ರಾಜ್ಯದಲ್ಲಿ ಇಂದು ಕೊರೋನಾಗೆ 98 ಬಲಿ, ಬೆಂಗಳೂರಿನಲ್ಲಿ 1497 ಸೇರಿ 4752 ಮಂದಿಗೆ ಪಾಸಿಟಿವ್

Source: uni | Published on 4th August 2020, 12:13 AM | State News | Don't Miss |

 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 98 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2594ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 27 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 98 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1497 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4752 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,39, 571ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ಕಳೆದ 24 ಗಂಟೆಗಳಲ್ಲಿ 4776 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 62,500ಕ್ಕೆ ಏರಿಕೆಯಾಗಿದೆ. 
ರಾಜ್ಯದಲ್ಲಿ ಒಟ್ಟು 74469 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 629 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...