ಯೋಗಿ ಸಾಧನೆ ಬಿಂಬಿಸಲು ಬಂಗಾಳದ ಚಿತ್ರ ವಿವಾದದ ಕಿಡಿ ಹೊತ್ತಿಸಿದ ಜಾಹೀರಾತು

Source: PTI | By MV Bhatkal | Published on 12th September 2021, 7:17 PM | National News | Don't Miss |

ಕೋಲ್ಕತ್ತ: ಉತ್ತರ ಪ್ರದೇಶವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ಆಗಿರುವ ಅಭಿವೃದ್ಧಿ ಬಿಂಬಿಸುವ ಜಾಹೀರಾತಿನಲ್ಲಿ ಕೋಲ್ಕತ್ತದ ಮೇಲ್ಸೇತುವೆಯ ಚಿತ್ರ ಬಳಸಿರುವುದು ಈಗ ವಿವಾದದ ಕಿಡಿ ಹೊತ್ತಿಸಿದೆ.

ಪಶ್ಚಿಮ ಬಂಗಾಳದ ಬಿಜೆಪಿ ಘಟಕವು, ಉಲ್ಲೇಖಿಸಿದ ಮೇಲ್ಸೇತುವೆ ಚಿತ್ರವು ಕೋಲ್ಕತ್ತದ್ದೇ ಎಂಬುದು ಇನ್ನೂ ದೃಢಪಡಬೇಕಾಗಿದೆ ಎಂದು ಪ್ರತಿಕ್ರಿಯಿಸಿದೆ. ಯೋಗಿ ಆದಿತ್ಯನಾಥ ಅವರ ಚಿತ್ರವನ್ನು ಒಳಗೊಂಡಿದ್ದ ಜಾಹೀರಾತಿನಲ್ಲಿ ಮೇಲ್ಸೇತುವೆ ಮತ್ತು ಗಗನಚುಂಬಿ ಕಟ್ಟಡದ ಚಿತ್ರವನ್ನು ಬಳಸಲಾಗಿತ್ತು.

ಈ ಜಾಹೀರಾತು ಪ್ರಕಟಿಸಿದ್ದ ಇಂಡಿಯನ್‌ ಎಕ್ಸ್‌ಪ್ರೆಸ್‌ ಪತ್ರಿಕೆ ತಿದ್ದುಪಡಿ ಪ್ರಕಟಿಸಿದೆ. ‘ಉತ್ತರ ಪ್ರದೇಶ ಕುರಿತ ಜಾಹೀರಾತಿನಲ್ಲಿ ಸಂಬಂಧವಿಲ್ಲದ ಚಿತ್ರವನ್ನು ಪತ್ರಿಕೆಯ ಮಾರುಕಟ್ಟೆ ವಿಭಾಗ ಬಳಸಿದೆ. ಈ ಲೋಪಕ್ಕೆ ವಿಷಾದಿಸುತ್ತೇವೆ, ಉಲ್ಲೇಖಿತ ಚಿತ್ರವನ್ನು ಪತ್ರಿಕೆಯ ಡಿಜಿಟಲ್‌ ಆವೃತ್ತಿಗಳಿಂದ ತೆಗೆಯಲಾಗಿದೆ’ ಎಂದು ತಿಳಿಸಿದೆ.

ಜಾಹೀರಾತಿಗೆ ಸಂಬಂಧಿಸಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿರುವ ಟಿಎಂಸಿ, ಜಾಹೀರಾತಿನ ಮೂಲಕ ಬಿಜೆಪಿಯು ಪರೋಕ್ಷವಾಗಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಒಪ್ಪಿಕೊಂಡಿದೆ ಮತ್ತು ಇದನ್ನು ಸೂಕ್ತವಾಗಿ ಬಳಕೆ ಮಾಡಿಕೊಂಡಿದೆ ಎಂದು ತಿಳಿಸಿದೆ.

ಪಶ್ಚಿಮ ಬಂಗಾಳ ಬಿಜೆಪಿ ಘಟಕ ಪ್ರಧಾನ ಕಾರ್ಯದರ್ಶಿ ಸಯಾಂತನ್‌ ಬಸು ಅವರು, ‘ಒಂದು ವೇಳೆ ಉಲ್ಲೇಖಿತ ಮೇಲ್ಸೇತುವೆ ಚಿತ್ರ ಪಶ್ಚಿಮ ಬಂಗಾಳದ್ದೇ ಎಂದುಕೊಂಡರೂ, ರಾಜ್ಯದಲ್ಲಿ ಇದನ್ನು ಹೊರತುಪಡಿಸಿ ಬೇರಾವುದೇ ಅಭಿವೃದ್ಧಿಯಾಗಿಲ್ಲ. ಉತ್ತರ ಪ್ರದೇಶದಲ್ಲಿ ಅನೇಕ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಅನೇಕ ಮೇಲ್ಸೇತುವೆಗಳು ಕುಸಿದಿವೆ’ ಎಂದು ಟೀಕಿಸಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...