ಮನೆಯ ಚಾವಣಿ ಕುಸಿದು ಬಾಲಕ ಮೃತ

Source: sonews | By Staff Correspondent | Published on 24th October 2020, 9:56 PM | Coastal News |

ಶ್ರೀನಿವಾಸಪುರ: ಇಲ್ಲಿಗೆ ಸಮೀಪದ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಚಾವಣಿ ಕುಸಿದು ಬಿದ್ದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆಸಿದೆ.

ಹರೀಶ್‌ (9) ಮೃತ ಬಾಲಕ. ಮೃತನ ಅಣ್ಣ ಮಣಿಕಂಠ (13) ಹಾಗೂ ತಾಯಿ ಅನಂದಮ್ಮ (40) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಭೇಟಿ: ಸಂಸದ ಎಸ್‌.ಮುನಿಶಾಮಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ರೂ.1ಲಕ್ಷದ ಚೆಕ್‌ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಹಳೆಯ ಮನೆಗಳು ದೊಡ್ಡ ಸಂಖ್ಯೆಯಲ್ಲಿವೆ. ಅಂಥ ಮನೆಗಳನ್ನು ಗುರುತಿಸಿ ಹೊಸ ಮನೆಗಳನ್ನು ನಿರ್ಮಿಸಿಕೊಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯದರ್ಶಿಗೆ ತಿಳಿಸಲಾಗಿದೆ. ಈಗ ಮಗನನ್ನು ಕಳೆದುಕೊಂಡಿರುವ ಕುಟುಂಬಕ್ಕೆ ಹೊಸ ಮನೆ ನಿರ್ಮಿಸಿಕೊಡಲಾಗುವುದು ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್‌.ವೇಣುಗೋಪಾಲ್‌, ಮುಖಂಡರಾದ ಎಂ.ಲಕ್ಷ್ಮಣಗೌಡ, ಇ.ಶಿವಣ್ಣ, ಅಶೋಕ್‌ ರೆಡ್ಡಿ, ನಾಗರಾಜ್‌ ಇದ್ದರು

ಜಿಲ್ಲಾಧಿಕಾರಿ ಭೇಟಿ: ಜಿಲ್ಲಾಧಿಕಾರಿ ಸಿ.ಸತ್ಯಭಾಮ ಗ್ರಾಮಕ್ಕೆ ಭೇಟಿ ನೀಡಿ, ಸಂತ್ರಸ್ತ ಕುಟುಂಬಕ್ಕೆ ರೂ.4 ಲಕ್ಷ ದ ಚೆಕ್‌ ನೀಡಿದರು. ಕುಟುಂಬಕ್ಕೆ ಶೀಘ್ರವಾಗಿ ಮನೆ ನಿರ್ಮಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಮೃತ ಬಾಲಕನ ಅಂತ್ಯ ಸಂಸ್ಕಾರ ನಡೆಸಲು ತಾಲ್ಲೂಕು ಕಚೇರಿ ವತಿಯಿಂದ ರೂ.5 ಸಾವರ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ರವಿಕುಮಾರ್‌, ಉಪ ವಿಭಾಗಾಧಿಕಾರಿ ವಿ.ಸೋಮಶೇಕರ್‌, ಉಪ ತಹಶೀಲ್ದಾರ್‌ ಚಂದ್ರಪ್ಪ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...