ಅಂಕೋಲಾದಲ್ಲಿ ಹಳ್ಳಕ್ಕೆ ಬಿದ್ದ ಕಾರು. ನಾಲ್ವರು ಪಾರು. ಕಾರಿನಲ್ಲಿದ್ದ ಶ್ವಾನ ಸಾವು.

Source: SO News | By Laxmi Tanaya | Published on 5th October 2020, 10:15 PM | State News | Don't Miss |

ಅಂಕೋಲಾ : ಗೋವಾದಿಂದ ಕುಮಟಾ ಕಡೆಗೆ  ತೆರಳುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ‌ ಅಂಕೋಲಾ ತಾಲೂಕಿನ ಬೆಳಸೆಯಲ್ಲಿ ನಡೆದಿದೆ.

  ಬೆಂಗಳೂರು ಮೂಲದ ನಾಲ್ವರು ತಮ್ಮ ಶ್ವಾನದೊಂದಿಗೆ ಗೋವಾ ಪ್ರವಾಸ ಮುಗಿಸಿ ವಾಪಾಸ್ ಬೆಂಗಳೂರಿಗೆ ತೆರಳುತ್ತಿದ್ದರೆನ್ನಲಾಗಿದೆ.  ಅಂಕೋಲಾದ ಬೆಳಸೆ ತಲುಪುತ್ತಿದ್ದಂತೆ ಎದುರಿನಿಂದ ಕಾರೊಂದು ಬಂದಿದ್ದರಿಂದ ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಕಾರನ್ನ ಎಡಕ್ಕೆ ತಿರುಗಿಸಿದ್ದಾರೆ. ಈ ವೇಳೆ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಜಾರಿ ಹಳ್ಳದಲ್ಲಿ ಮುಳುಗಿದೆ. 

ಘಟನೆಯಲ್ಲಿ ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಈಜಿಕೊಂಡು ಮೇಲಕ್ಕೆ ಬಂದಿದ್ದಾರೆ.ಆದರೆ ಕಾರಿನಲ್ಲಿದ್ದ  ನಾಯಿ  ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ.

 ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು,  ಪರಿಶೀಲನೆ ನಡೆಸಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...