ಚೆನ್ನೈ: ಬಹುಮತ ಕಳೆದುಕೊಂಡ ಕಾಂಗ್ರೆಸ್ ನೇತೃತ್ವದ ಸರಕಾರ

Source: VB | By S O News | Published on 17th February 2021, 1:52 PM | National News |

ಚೆನ್ನೈ: ಶಾಸಕ ಎ. ಜಾನ್ ಕುಮಾರ್ ಅವರು ತನ್ನ ರಾಜೀನಾಮೆಯನ್ನು ಸ್ವೀಕರ್ ಐಪಿ. ಶಿವಕೂಲುಂತು ಅವರಿಗೆ ಸಲ್ಲಿಸಿರುವುದರಿಂದ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ವಿಧಾನ ಸಭೆಯಲ್ಲಿ ಕಾಂಗ್ರೆಸ್ ಸರಕಾರ ಮಂಗಳವಾರ ಬಹುಮತ ಕಳೆದುಕೊಂಡಿದೆ. ಒಟ್ಟು 33 ಸದಸ್ಯ ಬಲದ ಪುದುಚೇರಿ ವಿಧಾನಸಭೆಯಲ್ಲಿ ಈ ಬೆಳವಣಿಗೆಯಿಂದಾಗಿ ಆಡಳಿತಾರೂಢ ಕಾಂಗ್ರೆಸ್-ಡಿಎಂಕೆ ಮೈತ್ರಿ ಹಾಗೂ ಎಐಡಿಎಂಕೆ-ಬಿಜೆಪಿ ಮೈತ್ರಿ ತಲಾ 14 ಶಾಸಕರನ್ನು ಹೊಂದುವಂತೆ ಆಗಿದೆ.

ಪುದುಚೇರಿ ವಿಧಾನಸಭೆಯಲ್ಲಿ ಪ್ರಸ್ತುತ ಮೂವರು ನಾಮನಿರ್ದೇಶಿತ ಶಾಸಕರು ಸೇರಿದಂತೆ ಒಟ್ಟು 28 ಸಕ್ರಿಯ ಶಾಸಕರಿದ್ದಾರೆ. ಕಾಂಗ್ರೆಸ್-ಡಿಎಂಕೆಯ ಆಡಳಿತಾರೂಢ ಮೈತ್ರಿಯಲ್ಲಿ ಮೂವರು ಡಿಎಂಕೆ ಶಾಸಕರು, ಓರ್ವ ಸ್ವತಂತ್ರ ಶಾಸಕ ಹಾಗೂ 10 ಕಾಂಗ್ರೆಸ್ ಶಾಸಕರಿದ್ದಾರೆ. ಪ್ರತಿಪಕ್ಷವಾದ ಎಐಡಿಎಂಕೆ-ಬಿಜೆಪಿ ಮೈತ್ರಿಯಲ್ಲಿ ಬಿಜೆಪಿಯ ಮೂವರು ನಾಮನಿರ್ದೇಶಿತ ಶಾಸಕರು. ಎನ್.ಆರ್, ಕಾಂಗ್ರೆಸ್‌ನ 7 ಶಾಸಕರು ಹಾಗೂ ಎಐಎಡಿಎಂಕೆಯ 4 ಶಾಸಕರು ಇದ್ದಾರೆ.

ಈ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಪ್ರತಿಪಕ್ಷಗಳು ಆಗ್ರಹಿಸಿವೆ. ಅಲ್ಲದೆ, ನಾರಾಯಣ ಸ್ವಾಮಿ ಅವರ ಸರಕಾರ ಈಗಾಗಲೇ ಅಲ್ಪಮತಕ್ಕೆ ಕುಸಿದಿದೆ ಎಂದು ಹೇಳಿವೆ. ಜಾನ್ ಕುಮಾರ್ ಅವರು ಇತ್ತೀಚೆಗೆ ಹೊಸದಿಲ್ಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾದ ಹಿನ್ನೆಲೆಯಲ್ಲಿ ಕುಮಾರ್ ಅವರು ಆಡಳಿತಾರೂಢ ಕಾಂಗ್ರೆಸ್-ಡಿಎಂಕೆ ಮೈತ್ರಿ ಸರಕಾರಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಹರಡಿತ್ತು. ಈ ಹಿಂದೆ ತನ್ನ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಆರೋಗ್ಯ ಸಚಿವ ಮಲ್ಲಾದಿ ಕೃಷ್ಣ ರಾವ್ ಸಂಪುಟ ಸದಸ್ಯನ ಸ್ಥಾನವನ್ನು ತ್ಯಜಿಸಿದ ದಿನದ ಬಳಿಕ ಜಾನ್ ಕುಮಾರ್ ರಾಜೀನಾಮೆ ನೀಡಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...