ಜರ್ಮನಿಯಲ್ಲಿ ಚಾಕು ಇರಿತಕ್ಕೊಳಾಗದ ಉಡುಪಿ ಮೂಲದ ದಂಪತಿ, ಪತಿ ಸಾವು

Source: so news | By MV Bhatkal | Published on 31st March 2019, 12:37 AM | Coastal News |


 
ಉಡುಪಿ: ಜರ್ಮನಿಯ ಮ್ಯೂನಿಚ್ ನಲ್ಲಿ ದುಷ್ಕರ್ಮಿಯೋರ್ವ ಕರ್ನಾಟಕ ಮೂಲದ ದಂಪತಿಗೆ ಚೂರಿ ಇರಿದಿದ್ದಾನೆ. ಘಟನೆಯಲ್ಲಿ ಪತಿ ಪ್ರಶಾಂತ್ ಮೃತಪಟ್ಟಿದ್ದು, ಪತ್ನಿ ಸ್ಮಿತಾ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜರ್ಮನಿಯ ಖಾಸಗಿ ಆಸ್ಪತ್ರೆಯಲ್ಲಿ ಇರಿತಕ್ಕೊಳಗಾದ ಸ್ಮಿತಾ ಚೇತರಿಸಿಕೊಳ್ಳುತ್ತಿದ್ದಾರೆ.
ಸ್ಮಿತಾ ಮೂಲತಃ ಉಡುಪಿ ಜಿಲ್ಲೆಯ ಸಿದ್ಧಾಪುರದವರು. ಸ್ಮಿತಾ ತಂದೆ ಚಂದ್ರಮೌಳಿ ಸಿದ್ದಾಪುರದಲ್ಲೇ ಆಯುರ್ವೇದಿಕ್ ಕ್ಲಿನಿಕ್ ಹೊಂದಿದ್ದಾರೆ. ಘಟನೆ ಬಗ್ಗೆ ಮಾಹಿತಿ ಸಿಕ್ಕಕೂಡಲೇ ಸ್ಮಿತಾ ಕುಟುಂಬ ಆಘಾತಕ್ಕೊಳಗಾಗಿದ್ದು, ಕುಟುಂಬಸ್ಥರು ಜರ್ಮನಿಗೆ ತೆರಳುವ ಸಿದ್ಧತೆ ಮಾಡಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಭಾರತೀಯ ದಂಪತಿ ಪ್ರಶಾಂತ್ ಮತ್ತು ಸ್ಮಿತಾ ಬಸ್ರೂರು ಎಂಬವರಿಗೆ ಅಪರಿಚಿತ ವಲಸಿಗನೊಬ್ಬ ಚೂರಿಯಿಂದ ಇರಿದಿದ್ದಾನೆ. ಪ್ರಶಾಂತ್ ಮೃತಪಟ್ಟಿದ್ದು, ಸ್ಮಿತಾ ಬಸ್ರೂರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್ ಅವರ ಸಹೋದರನನ್ನು ಮ್ಯೂನಿಚ್ ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಶಾಂತ್ ಮತ್ತು ಸ್ಮಿತಾ ದಂಪತಿ 15 ವರ್ಷಗಳಿಂದ ಮ್ಯೂನಿಚ್ ನಲ್ಲಿ ನೆಲೆಸಿದ್ದರು. ಇವರಿಗೆ ಒಬ್ಬ ಪುತ್ರಿ ಮತ್ತು ಒಬ್ಬ ಪುತ್ರನಿದ್ದಾನೆ. ಸ್ಮಿತಾ ಸಿದ್ದಾಪುರ ಮೂಲದವರಾದರೆ, ಪ್ರಶಾಂತ್ ಶಿವಮೊಗ್ಗದ ಹೊಸನಗರದವರು. ಕುಂದಾಪುರದಲ್ಲಿ ಮನೆ ಕಟ್ಟಿದ್ದಾರೆ. ಕೆಲಕಾಲ ಬೆಂಗಳೂರಿನಲ್ಲಿದ್ದು, ಈಗ ಜರ್ಮನಿಯಲ್ಲಿದ್ದಾರೆ.
ಸ್ಮಿತಾ ಸಹೋದರ ಸುಜಯ್ ಮತ್ತು ಆಪ್ತರು ಜರ್ಮನಿ ತೆರಳಲಿದ್ದಾರೆ. ಜರ್ಮನಿಯಲ್ಲಿ ನಡೆದ ಘಟನೆ ಬಗ್ಗೆ ಸ್ಥಳೀಯರು, ಡಾ. ಚಂದ್ರಮೌಳಿಯವರ ಆಪ್ತರು ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...