ಮುಖ್ಯಮಂತ್ರಿಯನ್ನು ಭೇಟಿಯಾದ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ನಿಯೋಗ

Source: SOnews | By Staff Correspondent | Published on 26th July 2023, 3:12 PM | Coastal News | Don't Miss |

ಅಹಿಂದ ವರ್ಗದ ಸಂವಿಧಾನಿಕ ಹಕ್ಕುಗಳ ಸಂರಕ್ಷಣೆಗೆ ಸರ್ಕಾರ ಬದ್ಧ-ಸಿದ್ಧರಾಮಯ್ಯ

 

ಬೆಂಗಳೂರು: ಅಖಿಲಾ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ಸದಸ್ಯರ ನಿಯೋಗ ಬುಧವಾರ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ಧರಾಯಮಯ್ಯ ರನ್ನು ಭೇಟಿಯಾಗಿ ಏಕರೂಪ ನಾಗರೀಕ ಸಂಹಿತೆ ಜಾರಿ ಕುರಿತಂತೆ ಮುಸ್ಲಿಮರು, ಆದಿವಾಸಿ, ಬುಡಕಟ್ಟು ಹಾಗೂ ಇನ್ನಿತರೆ ಅಲ್ಪಸಂಖ್ಯಾತ ಹಕ್ಕುಗಳಿಗೆ, ಕಾನೂನಿಗೆ ಧಕ್ಕೆಯಾಗುವ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

ತಮ್ಮನ್ನು ಭೇಟಿಯಾದ ನಿಯೋಗದ ಸದಸ್ಯರನ್ನುದ್ದೇಶಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ ಆತಂಕ ಬೇಡ ಎಂದು ಭರವಸೆಯನ್ನು ನೀಡಿದರು ಎನ್ನಲಾಗಿದೆ.

ಹಿಂದಿನ ಕಾನೂನು ಆಯೋಗವು ವೈವಿಧ್ಯತೆ ಇರುವ ಈ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ಕಾರ್ಯಸಾಧುವಲ್ಲ ಎಂದು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಇದೀಗ ಮತ್ತೆ ಈ ಕುರಿತು ಪರಿಶೀಲಿಸುವಂತೆ ಪ್ರಸಕ್ತ ಕಾನೂನು ಆಯೋಗಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ. ಅದರಂತೆ ಕಾನೂನು ಆಯೋಗವು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ತಮ್ಮ ಬೋರ್ಡ್‌ನ ವತಿಯಿಂದ ಏಕರೂಪ ನಾಗರಿಕ ಸಂಹಿತೆ ಜಾರಿ ವಿರೋಧಿಸಿ ಒಂದು ಕೋಟಿಗೂ ಹೆಚ್ಚು ಸಹಿ ಸಂಗ್ರಹ ಮಾಡಿ ಕಾನೂನು ಆಯೋಗಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ 'ಗೃಹಲಕ್ಷ್ಮಿ' ನೋಂದಣಿ: ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಏಕರೂಪ ನಾಗರಿಕ ಸಂಹಿತೆಯ ಕರಡು ಪ್ರಕಟವಾದ ನಂತರ ಪರಿಶೀಲಿಸಿ ಪ್ರತಿಕ್ರಿಯಿಸಲಾಗುವುದು. ಅಲ್ಪಸಂಖ್ಯಾತರ ಹಕ್ಕುಗಳ ದಮನಕ್ಕೆ ತಮ್ಮ ಸರ್ಕಾರ ಎಂದಿಗೂ ಅವಕಾಶ ನೀಡದು. ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ ಎಂದು ತಿಳಿಸಿದರು.  ಈ ಸಂದರ್ಭದಲ್ಲಿ ನಿಯೋಗದ ಸದಸ್ಯರು ವಕ್ಫ್‌ ಆಸ್ತಿಗಳ ರಕ್ಷಣೆ ಮಾಡುವಂತೆಯೂ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 

ಸಭೆಯಲ್ಲಿ ಮಾಜಿ ಉಪಾಧ್ಯಕ್ಷ ಕೆ. ರೆಹಮಾನ್‌ ಖಾನ್‌, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್‌, ಶಾಸಕ ರಿಜ್ವಾನ್‌ ಅರ್ಷದ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಝೀರ್‌ ಅಹ್ಮದ್‌, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಧ್ಯಕ್ಷ ಡಾ.ಬೆಲ್ಗಾಮಿ ಮುಹಮ್ಮದ್ ಸಾದ್, ಮೌಲಾನಾ ಸೈಯದ್‌ ಮುಸ್ತಫಾ ರಫಾಯಿ ನದ್ವಿ, ಮೌಲಾನಾ ಸೈಯದ್‌ ಮುಹಮ್ಮದ್‌ ತನ್ವೀರ್‌ ಹಶ್ಮಿ, ಮೌಲಾನಾ ಶಬೀರ್‌ ಅಹ್ಮದ್‌ ಹುಸೈನಿ ನದ್ವಿ, ಮುಫ್ತಿ ಇಫ್ತಿಕಾರ್‌ ಅಹ್ಮದ್‌ ಕಾಸ್ಮಿ ಮೊದಲಾದವರು ಉಪಸ್ಥಿತರಿದ್ದರು.

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...