ಒಂದುಕಾಲು ದಿನಗಳ ಕಾಲ ದೋಣಿಯಲ್ಲಿ ಪ್ರಾಣ ಉಳಿಸಿಕೊಂಡ ಮೀನುಗಾರ.

Source: SO News | Published on 8th September 2020, 12:40 PM | Coastal News | Don't Miss |

ಉಳ್ಳಾಲ: ಬಿರುಗಾಳಿಗೆ ಸಿಲುಕಿದ್ದ ಮೀನುಗಾರನೋರ್ವ ಒಂದುಕಾಲು ದಿನಗಳ ಬಳಿಕ ಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ.

ಉಳ್ಳಾಲ ಹೊಗೆ ನಿವಾಸಿ ಆರ್ಥರ್‌ ಸುನಿಲ್‌ ಕುವೆಲ್ಲೋ (45) ಪರ್ಶೀನ್ ಬೋಟಿಂದ ಮೀನುಗಾರಿಕೆಗೆ ತೆರಳಿದ್ದಾಗ ಅಪಾಯಕ್ಕೆ  ಸಿಲುಕಿದ್ದರು. 

ಪರ್ಸಿನ್‌ ಬೋಟ್‌ನಲ್ಲಿ ಉಳ್ಳಾಲ ಉಳಿಯದ 29 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಅಂದು ಬೆಳಗ್ಗೆ ಬೋಟ್‌ನ ಬೆಲ್ಟ್ ತುಂಡಾಗಿದ್ದು, ಈ ಸಂದರ್ಭದಲ್ಲಿ ಸಮುದ್ರಕ್ಕೆ ಬೀಸಿದ್ದ ಬಲೆ ಸಂಪೂರ್ಣ ಮುದ್ದೆಯಾಗಿತ್ತು. ಮೀನುಗಾರರು ರಾತ್ರಿವರೆಗೆ ಬಲೆಯನ್ನು ಬಿಡಿಸುವ ಕಾಯಕದಲ್ಲಿ ತೊಡಗಿದ್ದರು. ರಾತ್ರಿ 12 ಗಂಟೆ ಸುಮಾರಿಗೆ ಗಾಳಿ ಮಳೆ ಹೆಚ್ಚಾಗಿ ಬೋಟ್‌ ಗೆ ಕಟ್ಟಿದ್ದ ಪಾತಿ ಹಗ್ಗ ತುಂಡಾಗಿ ಸಮುದ್ರ ಪಾಲಾಯಿತು.

ಸುನೀಲ್‌ ಅವರು ಬಲೆ ಎಳೆಯಲೆಂದು ಪಾತಿಯಲ್ಲಿ ಕುಳಿತಿದ್ದರು. ಬೋಟ್‌ನ ತಾಂತ್ರಿಕ ತೊಂದರೆಯಿಂದಾಗಿ ರಕ್ಷಿಸಲು ಸಾಧ್ಯವಾಗಿಲ್ಲ. ಸೋಮವಾರ ಹಗಲಿಡೀ ಸಮುದ್ರದಲ್ಲಿ ಹುಡುಕಾಡಿದ್ದು ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು.
ಪರ್ಸೀನ್ ಬೋಟ್ ನಿಂದ ತಪ್ಪಿಸಿಕೊಂಡಿದ್ದ ಸುನಿಲ್ ಸತತ 30 ಗಂಟೆಗಳ ನಂತರ ಸಮುದ್ರದಲ್ಲಿ ಏಕಾಂಗಿ ಹೋರಾಟ ನಡೆಸಿ ಮಲ್ಪೆಗೆ ಬಂದು ಸೇರಿದ್ದು ಅದೃಷ್ಟವಶಾತ್ ಬಚಾವ್ ಆಗಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...