ಆರ್.ಆರ್.ನಗದಲ್ಲಿ ಬಿಜೆಪಿಯ ಮುನಿರತ್ನ ಹ್ಯಾಟ್ರಿಕ್ ಗೆಲುವು

Source: sonews | By Staff Correspondent | Published on 10th November 2020, 5:38 PM | State News |

ಬೆಂಗಳೂರು: ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಜಯಬೇರಿ ಸಾಧಿಸಿದ್ದಾರೆ. ಇದರೊಂದಿಗೆ ಮುನಿರತ್ನ ಈ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವಿನ ದಾಖಲೆ ನಿರ್ಮಿಸಿದ್ದಾರೆ. ಗೆಲುವಿನ ಬಗ್ಗೆ ಚುನಾವಣಾ ಆಯೋಗದ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.

25 ಸುತ್ತುಗಳಲ್ಲಿ ನಡೆದ ಮತ ಎಣಿಕೆಯಲ್ಲಿ ಮುನಿರತ್ನ ಅವರು ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್. ವಿರುದ್ಧ 57,936 ಮತಗಳ ಭಾರೀ ಅಂತದಿಂದ ಜಯ ಗಳಿಸಿರುವುದು ಸ್ಪಷ್ಟವಾಯಿತು. ಮುನಿರತ್ನ ಒಟ್ಟು 1,25,734 ಮತಗಳನ್ನು ಗಳಿಸಿದರೆ, ಕುಸುಮಾ 67,798 ಮತಗಳನ್ನು ಗಳಿಸಿ ಸೋಲೊಪ್ಪಿಕೊಂಡಿದ್ದಾರೆ.

ಕಳೆದ ಬಾರಿ (2018ರಲ್ಲಿ) ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮುನಿರತ್ನ ಅವರು ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ವಿರುದ್ಧ 41,162 ಮತಗಳ ಅಂತರದಿಂದ ಜಯಿಸಿದ್ದರು. ಈ ಸಲ ಗೆಲುವಿನ ಅಂತರವನ್ನು 57,936 ಮತಗಳಿಗೆ ಹೆಚ್ಚಿಸಿಕೊಂಡಿದ್ದಾರೆ.

2018ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಫರ್ದಿಸಿದ್ದ ಮುನಿರತ್ನ ಅವರು ಬದಲಾದ ರಾಜಕಾರಣದಲ್ಲಿ 2019ರ ಜುಲೈಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದೀಗ ಅವರು ಬಿಜೆಪಿಯಿಂದ 3ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದಕ್ಕೂ ಮೊದಲು 2013 ಮತ್ತು 2018ರಲ್ಲಿ ಅವರು ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು.

ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಕುಸುಮಾ ಎಚ್. 67,798 ಮತಗಳನ್ನು ಗಳಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 10,251 ಅಲ್ಪ ಮತಗಳನ್ನು ಗಳಿಸಲಷ್ಟೇ ಶಕ್ತರಾಗಿದ್ದಾರೆ. ಗಮನಿಸಬೇಕಾದ ಅಂಶವೇನೆಂದರೆ ಈ ಕ್ಷೇತ್ರದಲ್ಲಿ ಭಾರೀ ಪ್ರಮಾಣದ ಅಂದರೆ 2,494 ನೋಟಾ ಮತಗಳು ಚಲಾವಣೆಯಾಗಿವೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...